ಪಾಟ್ನಾ, ನ.19: ಬಿಹಾರದ ನೂತನ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ ಅವರು 7ನೇ ಬಾರಿಗೆ ಇಂದು ಪ್ರತಿಜ್ಞಾವಿಧಿ ಸ್ವೀಕರಿಸಿದರು. ಸತತ ನಾಲ್ಕನೇ ಅವಧಿಗೆ ಸಿಎಂ ಆಗಿ ಅಧಿಕಾರ ಸ್ವೀಕರಿಸಿದ್ದಾರೆ. ಉತ್ತರ ಪ್ರದೇಶ ಮಾದರಿಯಲ್ಲಿ ಇಬ್ಬರು ಉಪ ಮುಖ್ಯಮಂತ್ರಿಗಳನ್ನು ಬಿಹಾರ ಸಚಿವ ಸಂಪುಟ ಹೊಂದಿದೆ. ನಿತೀಶ್ ಅವರ ನಂತರ ತಾರ್ ಕಿಶೋರ್ ಪ್ರಸಾದ್, ರೇಣು ದೇವಿ ಅವರು ಪ್ರಮಾಣ ವಚನ ಸ್ವೀಕರಿಸಿದ್ದು, ಇಬ್ಬರು ಕೂಡಾ ಉಪ ಮುಖ್ಯಮಂತ್ರಿಯಾಗಿ ಕಾರ್ಯ ನಿರ್ವಹಿಸಲಿದ್ದಾರೆ. ಈ ನಡುವೆ ವಿಧಾನಸಭಾ ಸ್ಪೀಕರ್ ಸ್ಥಾನ ಯಾರಿಗೆ ಸಿಗಲಿದೆ ಎಂಬ ಕುತೂಹಲದ ಪ್ರಶ್ನೆಗೆ ಉತ್ತರ ಸಿಗಬೇಕಿದೆ. ಆದರೆ, ಸದ್ಯಕ್ಕೆ ಮಾಜಿ ಸಿಎಂ ಜಿತಿನ್ ರಾಂ ಮಾಂಝಿ ಅವರು
ಜಿತಿನ್ ರಾಂ ಮಾಂಝಿ ಅವರು ನಿತೀಶ್ ಕುಮಾರ್ ಸಚಿವ ಸಂಪುಟ ಸೇರುವುದಿಲ್ಲ ಎಂದು ಘೋಷಿಸಿದ್ದಾರೆ. ಹೀಗಾಗಿ, ಮುಂದಿನ ಸ್ಪೀಕರ್ ಆಯ್ಕೆಯಾಗುವ ತನಕ ನವೆಂಬರ್ 23-24, 2020 ಅವಧಿಗೆ ಸಭಾಪತಿ ಸ್ಥಾನವನ್ನು ನಿಭಾಯಿಸಲಿದ್ದಾರೆ. ನವೆಂಬರ್ 23 ರಿಂದ ಹೊಸ ವಿಧಾನಸೌಧ ಭವನದಲ್ಲಿ ಸದನದ ಕಲಾಪಗಳು ಆರಂಭವಾಗಲಿದೆ.