ನಾಡಿನ ಹಿರಿಯ ವಿದ್ವಾಂಸ, ಪದ್ಮಶ್ರೀ ವಿದ್ಯಾವಾಚಸ್ಪತಿ ಡಾ.ಬನ್ನಂಜೆ ಗೋವಿಂದಾಚಾರ್ಯ ಅವರ ನಿಧನಕ್ಕೆ ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಮಾಧ್ವ ತತ್ವದಲ್ಲಿ ಅಪಾರ ಪಾಂಡಿತ್ಯ ಹೊಂದಿದ್ದ ಗೋವಿಂದಾಚಾರ್ಯ ಅವರು ಕನ್ನಡದಲ್ಲಿ ಅನೇಕ ಮೇರು ಕೃತಿಗಳನ್ನು ರಚಿಸಿದ್ದು, ಹಲವಾರು ಸಂಸ್ಕøತ ಕೃತಿಗಳನ್ನು ಕನ್ನಡಕ್ಕೆ ಅನುವಾದ ಮಾಡುವ ಮೂಲಕ ಕನ್ನಡ ಸಾಹಿತ್ಯ ಲೋಕಕ್ಕೆ ಅನನ್ಯ ಕೊಡುಗೆ ನೀಡಿದ್ದಾರೆ. ಭಾರತೀಯ ತತ್ವಶಾಸ್ತ್ರ ಮತ್ತು ಹಿಂದೂ ಧರ್ಮಗ್ರಂಥಗಳ ಬಗ್ಗೆ ಆಳವಾದ ಜ್ಞಾನ ಹೊಂದಿದ್ದ ಅವರು ತಮ್ಮ ಪಾಂಡಿತ್ಯ ಪೂರ್ಣ ಪ್ರವಚನಗಳ ಮೂಲಕ ಪ್ರಪಂಚದಾದ್ಯಂತ ಪ್ರವಾಸ ಮಾಡಿದ್ದರು.
ಅವರ ನಿಧನದಿಂದ ಕನ್ನಡ ನಾಡು ಹಿರಿಯ ಆಧ್ಯಾತ್ಮಿಕ ವಿದ್ವಾಂಸರನ್ನು ಕಳೆದುಕೊಂಡಂತಾಗಿದೆ. ಭಗವಂತನು ಅವರ ಆತ್ಮಕ್ಕೆ ಚಿರಶಾಂತಿಯನ್ನು ದಯಪಾಲಿಸಲಿ. ಅವರ ಅಗಲಿಕೆಯು ದುಃಖವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬದ ಸದಸ್ಯರಿಗೆ ಹಾಗೂ ನಾಡಿನೆಲ್ಲೆಡೆ ಇರುವ ಅಭಿಮಾನಿಗಳಿಗೆ ಭಗವಂತ ನೀಡಲಿ ಎಂದು ಅವರು ಸಂತಾಪ ಸಂದೇಶದಲ್ಲಿ ಪ್ರಾರ್ಥಿಸಿದ್ದಾರೆ.
previous post
next post