ರಾಜ್ಯ ಸರಕಾರಿ ನೌಕರರ ಸೌಹಾರ್ದ ಸಹಕಾರಿ ಸಂಸ್ಥೆ ಹಾಗೂ ಸರ್ಕಾರಿ ನೌಕರರ ಗೃಹ ನಿರ್ಮಾಣ ಸಹಕಾರ ಸಂಘದ ವಾರ್ಷಿಕ ಸರ್ವಸದಸ್ಯರ ಸಭೆ ಡಿ.೨೫ ರಂದು ಶಿವಮೊಗ್ಗ ಕುವೆಂಪು ರಂಗಮAದಿರಲ್ಲಿ ನಡೆಯಲಿದೆ ಎಂದು ರಾಜ್ಯ ಸರಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ತಿಳಿಸಿದರು. ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಚಿವ ಕೆ.ಎಸ್.ಈಶ್ವರಪ್ಪ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಸಂಸದ ಬಿ.ವೈ.ರಾಘವೇಂದ್ರ ಅವರು, ನೌಕರರ ಸನ್ಮಾನ ಮತ್ತು ಕ್ಯಾಲೆಂಡರ್ ಬಿಡುಗಡೆ ಮಾಡುವರು. ಮುಖ್ಯ ಅತಿಥಿಗಳಾಗಿ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಜಿಲ್ಲಾಪಂಚಾಯಿತಿ ಸಿಇಒ ಎಂ.ಎಲ್.ವೈಶಾಲಿ ಹಾಗೂ ಎಸ್ಪಿ ಶಾಂತರಾಜ್ ಮತ್ತಿತರರು ಭಾಗವಹಿಸುವರು ಎಂದು ಹೇಳಿದರು. ಈ ಕಾರ್ಯಕ್ರಮದಲ್ಲಿ ನೌಕರರ ಸಂಘದ ಹಿರಿಯರು ಹಾಗೂ ಸಾಧಕರನ್ನು ಅಭನಂದಿಸಲಾಗುವುದು ಎಂದು ಅವರು ಹೇಳಿದರು.
previous post
next post