ರಿಪ್ಪನ್ ಪೇಟೆ ಗ್ರಾಮಪಂಚಾಯಿತಿಯಲ್ಲಿ ಮಹಿಳಾ ಮತದಾರರ ಹೆಚ್ಚಿದ್ದಾರೆ. ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ 7 ವಾರ್ಡಗಳಿದ್ದು ಮತದಾರರಲ್ಲಿ ಪುರುಷರಿಗಿಂತ ಮಹಿಳಾ ಮತದಾರರು ಅಧಿಕವಿದ್ದು , ಇದರಲ್ಲಿ 3055 ಪುರುಷರು, 3130 ಮಹಿಳೆಯರು ಸೇರಿದಂತೆ ಒಟ್ಟು 6185 ಮತದಾರರಿದ್ದಾg ಎಂದು ಚುನಾವಣಾ ಅಧಿಕಾರಿ ಅಂಜನ್‍ಕುಮಾರ್ ತಿಳಿಸಿದ್ದಾರೆ.
ಒಟ್ಟು 21 ಸ್ಥಾನಗಳಿಗೆ 74 ನಾಮ ಪತ್ರ ಸಲ್ಲಿಕೆಯಾಗಿದೆ. ಈಗಾಗಲೇ ಸ್ಥಳೀಯ ಆಡಳಿತ ವ್ಯವಸ್ಥೆಯೊಂದಿಗೆ ಚುನಾವಣೆಯ ಸಲುವಾಗಿ ಸಭೆ ನಡೆಸುವುದರ ಜೋತೆಗೆ ಮತಗಟ್ಟೆ ಕೇಂದ್ರಗಳ ಪರಿಶೀಲನೆ ನಡೆಸಲಾಗಿದೆ. ಗ್ರಾಮ ಪಂಚಾಯತ್ ಚುನಾವಣೆ ಪಕ್ಷಾರಹಿತವಾಗಿರುವುದರಿಂದ ಚುನಾವಣೆಯಲ್ಲಿ ಸ್ಪರ್ಧಿಸಿರುವ ಅಭ್ಯರ್ಥಿಗಳು ಯಾವುದೇ ರಾಜಕೀಯ ಪಕ್ಷಗಳ ಮುಖಂಡರ ಭಾವಚಿತ್ರ ಮತ್ತು ಚಿನ್ಹೆಯನ್ನು ಬಳಸಿಕೊಳ್ಳಲು ಅವಕಾಶವಿರುವುದಿಲ್ಲ . ಈಗಾಗಲೇ ಈ ಕುರಿತು ಚುನಾವಣಾ ಆಯೋಗ ಸ್ಪಷ್ಟ ನಿರ್ದೇಶನವನ್ನು ನೀಡಿದ್ದು. ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯಥಿಗಳು ನಿಯಮಗಳನ್ನು ಕಡ್ಡಾಯವಾಗಿ ಪಾಲಿಸದಿದ್ದರೆ ಅವರುಗಳ ವಿರುದ್ದ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದರು.
previous post