ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ದಿ ಪ್ರಾಧಿಕಾರದಲ್ಲಿ ೨೦೦೮-೧೩ರಲ್ಲಿ ನಿವೇಶನ ಹಂಚಿಕೆಯಲ್ಲಿ ನಡೆದ ಭಾರೀ ಭ್ರಷ್ಟಾಚಾರದ ತನಿಖೆಯನ್ನು ಲೋಕಾಯುಕ್ತ ನಡೆಸಿ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದೆ. ಈ ಬಗ್ಗೆ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳುವಂತೆ ಮಾಜಿ ಶಾಸಕ ಕೆ.ಬಿ.ಪ್ರಸನ್ನಕುಮಾರ್ ಒತ್ತಾಯಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು , ೨೦೦೮ರಿಂದ ೧೩ರವರೆಗೆ ರಾಜ್ಯದಲ್ಲಿ ಬಿಜೆಪಿ ಸರ್ಕಾರವಿತ್ತು. ಆ ಅವಧಿಯಲ್ಲಿ ಸೂಡಾ ವತಿಯಿಂದ ವಾಜಪೇಯಿ ಬಡಾವಣೆ ರಚಿಸಿ ೧೪೨ ನಿವೇಶನಗಳನ್ನು ಅರ್ಹರಲ್ಲದವರಿಗೂ ಸಹ ಹಂಚಿಕೆ ಮಾಡಲಾಗಿತ್ತು. ಈ ಬಗ್ಗೆ ಸಾಕಷ್ಟು ದೂರುಗಳು ಬಂದಿದ್ದವು. ೨೦೧೩ರಲ್ಲಿ ಬಂದ ಕಾಂಗ್ರೆಸ್ ಸರ್ಕಾರ ಈ ಭ್ರಷ್ಟಾಚಾರದ ಬಗ್ಗೆ ಲೊಕಾಯುಕ್ತ ತನಿಖೆಗೆ ಆದೇಶ ನೀಡಿತ್ತು ಎಂದು ತಿಳಿಸಿದರು.
ಲೋಕಾಯುಕ್ತರ ಸುಧೀರ್ಘ ತನಿಖೆಯ ನಂತರ ನಿವೇಶನ ಹಂಚಿಕೆಯಲ್ಲಿ ಭ್ರಷ್ಟಾಚಾರ ನಡೆದಿರುವುದನ್ನು ಪತ್ತೆ ಮಾಡಿದ್ದಾರೆ. ನಿಯಮ ಮೀರಿ ಹಂಚಿರುವ ನಿವೇಶನಗಳನ್ನು ರದ್ದು ಮಾಡಿ ಭ್ರಷ್ಟಾಚಾರದಲ್ಲಿ ತೊಡಗಿದ್ದ ಅಧಿಕಾರಿಗಳನ್ನು ಮತ್ತು ಅಂದಿನ ಅಧ್ಯಕ್ಷರ ವಿರುದ್ದ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಸಲ್ಲಿಸಿದ ವರದಿಯಲ್ಲಿ ತಿಳಿಸಿದ್ದು, ಸರ್ಕಾರ ಕೂಡಲೇ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಒತ್ತಾಯಿಸಿದರು.
previous post
next post