ಜಿಲ್ಲಾ ಪಂಚಾಯತ್ ಸದಸ್ಯ ಹಾಗೂ ಸಚಿವ ಕೆ.ಎಸ್.ಈಶ್ವರಪ್ಪ ಪುತ್ರ ಕೆ.ಇ.ಕಾಂತೇಶ್ ಅವರು ಹೊಳಲೂರು ಜಿಲ್ಲಾ ಪಂಚಾಯಿತಿ ವ್ಯಾಪ್ತಿಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳ ಪರವಾಗಿ ಬಿರುಸಿನ ಚುನಾವಣೆ ಪ್ರಚಾರ ಮಾಡಿದರು.
ಗೊಂದಿ ಚಟ್ನಳ್ಳಿ ಸೇರಿದಂತೆ ಹಲವು ಗ್ರಾಮಗಳಿಗೆ ಭೇಟಿ ನೀಡಿ ತಮ್ಮ ಪಕ್ಷದ ಅಭ್ಯರ್ಥಿಗಳೊಂದಿಗೆ ಮನೆಮನೆಗೆ ತೆರಳಿ ಮತಚಲಾಯಿಸುವಂತೆ ಕೇಳಿಕೊಂಡರು. ಕೇಂದ್ರ ಹಾಗೂ ರಾಜ್ಯ ಸರಕಾರಗಳ ಕೆಲಸವನ್ನು ನೋಡಿ ನಮ್ಮ ಅಭ್ಯರ್ಥಿಗಳನ್ನು ಗೆಲ್ಲಿಸಿ. ಅವರು ನಿಮ್ಮ ಗ್ರಾಮದ ಸೇವೆಯನ್ನು ನಿಸ್ವಾರ್ಥದಿಂದ ಮಾಡುವರು ಎಂದು ಮನವಿ ಮಾಡಿದರು ಈ ಸಂದರ್ಭದ ಮಾದ್ಯಮಗಳೊಂದಿಗೆ ಮಾತಾಡಿದ ಅವರು, ನಮ್ಮ ಪಕ್ಷ ಕಾರ್ಯಕರ್ತರ ಆಧಾರಿತ ಪಕ್ಷ ಎಲ್ಲ ಅಧಿಕಾರ ಅವರಿಂದಾಗಿಯೇ ಬಂದಿದೆ. ಈಗ ಅವರು ಚುನಾವಣೆಗೆ ಸ್ಪರ್ಧಿಸಿದ್ದಾರೆ. ಅವರಿಗೆ ನೈತಿಕ ಬೆಂಬಲ ನೀಡುವುದು ನಮ್ಮ ಕರ್ತವ್ಯ ಹಾಗಾಗಿ ಎಲ್ಲರಿಗೂ ಧೈರ್ಯ ತುಂಬುವ ಕೆಲಸ ಮಾಡುತ್ತಿದ್ದೇನೆ ಎಂದು ಹೇಳಿದರು.
previous post