ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಗ್ರಾಮಪಂಚಾಯಿತಿಗಳಿಗೆ ಎರಡನೇ ಹಂತದಲ್ಲಿ ಮತದಾನ ನಡೆಯಲಿದೆ. ಎಂ.ಎಸ್‌ಐಎಲ್ ಅಧ್ಯಕ್ಷ ಹಾಗೂ ಶಾಸಕರಾದ ಹರತಾಳು ಹಾಲಪ್ಪ ಅವರು ಕ್ಷೇತ್ರದಲ್ಲಿ ಭರದಿಂದ ಪ್ರಚಾರ ಮಾಡುತ್ತಿದ್ದಾರೆ. ಕ್ಷೇತ್ರದ ಹಲವು ಕಡೆಗಳಲ್ಲಿ ಮುಖಂಡರುಗಳನ್ನು ಭೇಟಿ ಮಾಡುತ್ತಿರುವ ಅವರು, ಸರಕಾರದ ಸಾಧನೆ ಮತ್ತು ತಮ್ಮ ಅವಧಿಯಲ್ಲಿ ಕ್ಷೇತ್ರದಲ್ಲಿ ಆಗುತ್ತಿರುವ ಕೆಲಸಗಳ ಬಗ್ಗೆ ಮತದಾರರಲ್ಲಿ ಅರಿವು ಮೂಡಿಸಬೇಕು. ಗ್ರಾಮೀಣ ರಸ್ತೆ, ಕುಡಿಯುವ ನೀರು ಸೇರಿದಂತೆ ಮೂಲಭೂತ ಸೌಕರ್ಯಗಳಿಗೆ ಆದ್ಯತೆ ನೀಡಲಾಗುತ್ತಿದೆ. ಶರಾವತಿ ಮುಳುಗಡೆ ಸಂಸತ್ರಸ್ಥರ ಭೂಮಿ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ತಾವು ಮಾಡುತ್ತಿರುವ ಪ್ರಯತ್ನದ ಬಗ್ಗೆಯೂ ಆ ಭಾಗದ ಜನರಲ್ಲಿ ಜಾಗೃತಿ ಮೂಡಿಸಿ ಎಂದು ಕಾರ್ಯಕರ್ತರಿಗೆ ಸೂಚನೆ ನೀಡಿದ್ದಾರೆ.
previous post
next post