ಶಿವಮೊಗ್ಗ ಮೆಡಿಕಲ್ ಕಾಲೇಜಿನ ಅಂತಿಮ ವರ್ಷದ ವಿದ್ಯಾರ್ಥಿನಿಯೊಬ್ಬಳು ನೇಣಿಗೆ ಶರಣಾಗಿದ್ದಾಳೆ.ಭದ್ರಾವತಿ ಮೂಲದ ಲಲಿತಾ ಆತ್ಮಹತ್ಯೆಮಾಡಿಕೊಂಡ ವಿದ್ಯಾರ್ಥಿನಿ. ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿಯಾಗಿದ್ದ ಈಕೆ ಬುಧವಾರ ಬೆಳಗಿನ ಜಾವ ತನ್ನ ರೂಮಿನಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ. ಶಿವಮೊಗ್ಗ ದೊಡ್ಡ ಪೇಟೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ದೂರು ದಾಖಲಿಸಿಕೊಂಡಿದ್ದಾರೆ. ವಿದ್ಯಾಥಿನಿ ಸಾವಿಗೆ ಕಾರಣ ತಿಳಿದುಬಂದಿಲ್ಲ.
next post