ವೈಕುಂಠ ಏಕಾದಶಿ ಹಾಗೂ ಕ್ರಿಸ್‌ಮಸ್ ದಿನವಾದ ಶುಕ್ರವಾರ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಬಿಡುವಿಲ್ಲದ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದರು. ಮಾಜಿ ಪ್ರಧಾನಿ ಅಟಲ್ ಬಿಹಾರಿ ಅವರ ಜಯಂತಿ ನಿಮಿತ್ತ ಗಾಂಧಿಪಾರ್ಕಿನಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ ನೀಡಿದರು. ಅದಾದ ಬಳಿಕ ಶಿವಮೊಗ್ಗ ಗೋಪಾಲಗೌಡ ಬಡಾವಣೆಯಲ್ಲಿ ಇಪ್ಪತ್ತು ಲಕ್ಷ ವೆಚ್ಚದ ಡಿವಿಜಿ ಪಾಕ್ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿದರು.
ಅದಾದ ಬಳಿಕ ಚಿಕ್ಕಲ್‌ನಲ್ಲಿ ನೀರಾವರಿ ಇಲಾಖೆಯಿಂದ ನಿರ್ಮಿಸಲಿರುವ ೪೦ ಲಕ್ಷ ವೆಚ್ಚದ ಸಮುದಾಯ ಭವನಕ್ಕೆ ಶಂಕುಸ್ಥಾಪನೆ ನೆರವೇರಿಸಿದರು. ಗಾಂಧಿಪಾರ್ಕ್ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂಸ್ ಬಿ.ವೈ ರಾಘವೇಂgದ್ರ, ಜಿಲ್ಲಾ ಬಿಜೆಪಿ ಅಧ್ಯಕ್ಷ ಟಿ.ಡಿ.ಮೇಘರಾಜ್, ಮೇಯರ್ ಸುವರ್ಣಶಂಕರ್, ಉಪಮೇಯರ್ ಸುರೇಖಾ ಮುರಳೀಧರ್, ಜ್ಞಾನೇಶ್ವರ್, ಚನ್ನಿ, ಸೂಡಾ ಅಧ್ಯಕ್ಷ ಜ್ಯೋತಿ ಪ್ರಕಾಶ್ ಮತ್ತಿತರರು ಹಾಜರಿದ್ದರು.
ಕೊರೊನ ಮುಕ್ತಿಗೆ ಪ್ರಾರ್ಥನೆ:
ವೈಕುಂಠ ಏಕಾದಶಿ ಅಂಗವಾಗಿ ಸಂಸದ ಬಿ.ವೈ.ರಾಘವೇಂದ್ರ ಅವರು, ಶಿಕಾರಿಪುರದ ಲಕ್ಷಿö್ಮÃ ವೆಂಕಟರಮಣ ದೇವಾಲಯಲ್ಲಿ ವಿಶೇಷ ಪೂಜೆ ಸಲ್ಲಿಸಿ ನಾಡಿಗೆ ಬಂದಿರುವ ಕೊರೊನ ಮುಕ್ತಿಗೆ ಪ್ರಾರ್ಥಿಸಿದರು. ಈ ಸಂದರ್ಭ ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಗುರುಮೂರ್ತಿ ಮತ್ತಿತರರು ಭಾಗವಹಿಸಿದ್ದರು.
previous post
next post