ಮಕ್ಕಳು ಪ್ರೌಢಾವಸ್ಥೆಗೆ ಬಂದಾಗ ಲೈಂಗಿಕ ಶಿಕ್ಷಣದ ಬಗ್ಗೆ ಅರಿವು ಮೂಡಿಸಿದರೆ ಮುಂದೆ ಎದುರಾಗಬಹುದಾದ ಸಮಸ್ಯೆಗಳನ್ನು ತಡೆಗಟ್ಟಬಹುದು ಎಂದು ಡಾ.ಮಂಜುನಾಥ್ ಹೇಳಿದರು.
ಶಿವಮೊಗ್ಗದ ಭಾರತೀಯ ಕುಟುಂಬ ಕಲ್ಯಾಣ ಸಂಸ್ಥೆಯಲ್ಲಿ ಮಂಗಳವಾರ ಆಯೋಜಿಸಿದ್ದ ಎನ್‍ಜಿಒ ಮೀಟ್ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಮಕ್ಕಳಲ್ಲಿ ಋತುಶ್ರಾವ, ಲೈಂಗಿಕ ಸಮಸ್ಯೆಗಳ ಬಗ್ಗೆ ಗೌಪ್ಯತೆ ಕಾಪಾಡಿದಷ್ಟೂ ಸಮಸ್ಯೆ ಬರುತ್ತವೆ. ಈ ಹಂತದಲ್ಲಿ ಪೋಷಕರಿಗೆ ಗುರುತರವಾದ ಜವಬ್ದಾರಿ ಇರುತ್ತದೆ. ಆರೋಗ್ಯ ಕುರಿತಾದ ಸ್ವಯಂ ಸೇವಾ ಸಂಸ್ಥೆಗಳು ಈ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ ಆಯೋಜಿಸಬೇಕೆಂದು ಹೇಳಿದರು.
ಡಾ.ಭಾರತಿದೇವಿ ಮಾತನಾಡಿ, ನವದಂಪತಿಗಳಲ್ಲಿ ಪ್ಯಾಮಿಲಿ ಪ್ಲಾನಿಂಗ್ ಮತ್ತಿತರ ಸಂಗತಿಗಳ ಬಗ್ಗೆ ಹೆಚ್ಚಿನ ತಿಳುವಳಿಕೆ ಅಗ್ಯವಿದೆ.ಯುವ ಸಮುದಾಯದ ಆರೋಗ್ಯ ಕಾಪಾಡುವುದು ಎಲ್ಲರ ಜವಾಬ್ದಾರಿ ಎಂದು ಹೇಳಿದರು.
ಭಾರತೀಯ ಕುಟುಂಬ ಕಲ್ಯಾಣ ಸಂಘದ ಅಧ್ಯಕ್ಷೆ ಪುಷ್ಪಾ ಶೆಟ್ಟಿ ಮಾತನಾಡಿ, ಸಂತಾನ ಹರಣ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗಳಲ್ಲಿ 15-20 ಸಾವಿರ ರೂ. ಖರ್ಚಾಗುತ್ತದೆ. ಆದರೆ ನಮ್ಮಲ್ಲಿ ಕೇವಲ 3 ಸಾವಿರದಲ್ಲಿ ಚಿಕಿತ್ಸೆ ನೀಡಲಾಗುತ್ತದೆ. ಈ ಬಗ್ಗೆ ಜನರಿಗೆ ತಿಳುವಳಿಕೆ ನೀಡಬೇಕು ಎಂದು ಮನವಿ ಮಾಡಿದರು.ರೆಡ್ ಕ್ರಾಸ್ ಸಂಸ್ಥೆಯ ಡಾ.ದಿನೇಶ್ ಪ್ರಥಮ ಚಿಕಿತ್ಸೆಯ ಬಗ್ಗೆ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಸಂಸ್ಥೆಯ ಕಾರ್ಯದರ್ಶಿ ಅಶೋಕ್‍ಕುಮಾರ್, ಭಾರತಿ ಚಂದ್ರಶೇಖರ್ ಮತ್ತಿತರರು ಹಾಜರಿದ್ದರು.
previous post
next post