ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಬಿಜೆಪಿ ಪ್ರಾಬಲ್ಯ ಸಾಧಿಸಿದೆ ಎಂದು ಪಂಚಾಯತ್ ರಾಜ್ ಮತ್ತುಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್,ಈಶ್ವರಪ್ಪ ಹೇಳಿದರು. ರಾಜ್ಯದಲ್ಲಿ ಶೇ.60 ಕ್ಕೂ ಹೆಚ್ಚು ಮಂದಿ ಬಿಜೆಪಿ ಬೆಂಬಲಿತ ಸದಸ್ಯರು ಆಯ್ಕೆಯಾಗಿದ್ದಾರೆ. ನಳೀನ್ ಕುಮಾರ್ ಕಟೀಲ್ ಅವರು ಅಧ್ಯಕ್ಷರಾದ ಮೇಲೆ ಗ್ರಾಮಸ್ವರಾಜ್ ಅಭಿಯಾನ ಹಮ್ಮಿಕೊಳ್ಳಲಾಗಿತ್ತು. ಇದರ ಫಲವಾಗಿ ಬಜೆಪಿಗೆ ತಕ್ಕ ಯಶಸ್ಸು ಸಿಕ್ಕಿದೆ ಎಂದು ಅವರು ಶಿವಮೊಗ್ಗದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಗ್ರಾಮದ ಅಡಳಿತ ಸರಿ ಇದ್ದರೆ ಸರಕಾರದ ಸೌಲತ್ತುಗಳು ಜನರಿಗೆ ತಲುಪುತ್ತವೆ. ಈ ದಿಸೆಯಲ್ಲಿ ಆಯ್ಕೆಯಾದ ಎಲ್ಲ ಸದಸ್ಯರಿಗೆ ಸರಕಾರ ತರಬೇತಿ ನೀಡಲಿದೆ. ಮುಂದಿನ ತಿಂಗಳು ಈ ತರಬೇತಿ ಕಾರ್ಯಗಾರಗಳನ್ನು ಬ್ಲಾಕ್‍ವೈಸ್ ಮಾಡಲಾಗುತ್ತದೆ. ಸಂಪನ್ಮೂಲ ವ್ಯಕ್ತಿಗಳು ಆಡಳಿತದ ಬಗ್ಗೆ ಮಾಹಿತಿ ನೀಡುವರು. ಮುಂದೆ ಅಧ್ಯಕ್ಷ-ಉಪಾಧ್ಯಕ್ಷರು ಹಾಗೂ ಪಿಡಿಒಗಳಿಗೂ ತರಬೇತಿ ನೀಡಲಾಗುವುದು ಎಂದು ಈಶ್ವರಪ್ಪ ಹೇಳಿದರು.
ಚೀಟಿ ಮೂಲಕ ಮೀಸಲು:
ಗ್ರಾಮ ಪಂಚಾಯಿತಿಗಳಿಗೆ ಅಧ್ಯಕ್ಷ-ಉಪಾಧ್ಯಕ್ಷರ ಮೀಸಲು ನಿರ್ಣಯ ಮಾಡುವುದು ಚುನಾವಣೆ ಆಯೋಗ. ಜಿಲ್ಲಾಧಿಕಾರಿಗಳಿಗೆ ಈ ಅಧಿಕಾರವನ್ನು ಆಯೋಗ ನೀಡಿರುತ್ತದೆ. ಹಿಂದಿನ ಅವಧಿಯಲ್ಲಿ ಪಂಚಾಯಿತಿಗಳಲ್ಲಿ ಎಲ್ಲ ಸದಸ್ಯರ ಸಮ್ಮುಖದಲ್ಲಿ ಚೀಟಿ ಹಾಕುವ ಮೂಲಕ ಮೀಸಲು ಆಯ್ಕೆ ಮಾಡಲಾಗಿತ್ತು. ಈ ಬಾರಿಯೂ ಯಾವುದೇ ಪಕ್ಷ ರಾಜಕಾರಣ ಇಲ್ಲದೆ ಗ್ರಾಮಗಳ ಅಭಿವೃದ್ಧಿ ದೃಷ್ಟಿಯಿಟ್ಟುಕೊಂಡು ಮೀಸಲು ಆಯ್ಕೆ ನಡೆಯುಲಿದೆ ಎಂದು ಈಶ್ವರಪ್ಪ ಹೇಳಿದರು.
ಜಿಲ್ಲಾ ಬಿಜೆಪಿ ಅಧ್ಯಕ್ಷ ಟಿ.ಡಿ.ಮೇಘರಾಜ್ ಮಾತನಾಡಿ, ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತರು ಅತ್ಯಧಿಕ ಸ್ಥಾನದಲ್ಲಿ ಗೆಲವು ಸಾಧಿಸಲಿದ್ದಾರೆ. ಪಕ್ಷದ ಸಕ್ರಿಯ ಕಾರ್ಯಕರ್ತರು ಹಾಗೂ ಯುವಕರಿಗೆ ಹೆಚ್ಚಿನ ಆದ್ಯತೆ ನೀಡಿ ಚುನಾವಣೆ ಕಣಕ್ಕಿಳಿಸಲಾಗಿತ್ತು. ನಮ್ಮ ಪಕ್ಷ ಹಾಗೂ ಸರಕಾರದ ಆಡಳಿತಕ್ಕೆ ಗ್ರಾಮಗಳ ಮತದಾರರು ಮನ್ನಣೆ ನೀಡಿದ್ದಾರೆ ಎಂದು ಹೇಳಿದರು.
previous post
next post