ಶಿವಮೊಗ್ಗ ಗ್ರಾಮಪಂಚಾಯಿತಿ ಚುನಾವಣೆಯಲ್ಲಿ ಬಿಜೆಪಿ ಸಾಧನೆ ಕಾಂಗ್ರೆಸ್ ನಾಯಕರಿಗೆ ನಡುಕ ಹುಟ್ಟಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿದರು.
ಬಿಜೆಪಿ ವಿಶೇಷ ಸಭೆಗೆ ಆಗಮಿಸಿದ ಅವರು ಶನಿವಾರ ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.
ರಾಜ್ಯದಲ್ಲಿ ಹೆಚ್ಚು ಬಿಜೆಪಿ ಕಾರ್ಯಕರ್ತರು ಚನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ. ಇದನ್ನು ನೋಡಿ ಹತಾಶರಾದ ಕಾಂಗ್ರೆಸ್‍ನ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಅವರು ಬೇಕಾಬಿಟ್ಟಿ ಹೇಳಿಕೆ ನೀಡುತ್ತಿದ್ದಾರೆ. ಸಿಎಂ ಬದಲಾವಣೆ ಇಲ್ಲ ಎಂದು ನಮ್ಮ ಪಕ್ಷದ ನಾಯಕರೇ ಸ್ಪಷ್ಟಪಡಿಸಿದ್ದಾರೆ. ಆದರೆ ಕಾಂಗ್ರೆಸ್ ನಾಯಕರು ಯಾಕೆ ಇಲ್ಲದ ಹೇಳಿಕೆ ನೀಡುತ್ತಾರೊ ಗೊತ್ತಿಲ್ಲ. ಇದು ಅವರ ಹತಾಶ ಭಾವನೆ ತೋರಿಸುತ್ತದೆ ಎಂದು ಕಟೀಲ್ ಹೇಳಿದರು.
ಬಿಜೆಪಿ ಕಾರ್ಯಕಾರಿ ಸಭೆ ಪ್ರತಿಮೂರು ತಿಂಗಳಿಗೊಮ್ಮೆ ನಡೆಯುತ್ತದೆ. ಈ ಬಾರಿ ಶಿವಮೊಗ್ಗದಲ್ಲಿ ನಡೆಯುತ್ತಿದೆ. ಇಲ್ಲಿ ಪಕ್ಷದ ಸಂಘಟನೆ, ಮುಂದಿನ ಕಾರ್ಯತಂತ್ರಗಳ ಬಗ್ಗೆ ಚರ್ಚೆ ನಡೆಯುತ್ತದೆ. ನಮ್ಮ ಪಕ್ಷದ ಹಲವು ನಾಯಕರು ಬರಲಿದ್ದಾರೆ ಎಂದು ಹೇಳಿದರು. ಸಕ್ರೆಬೈಲ್ ಬಳಿ ರಾಜ್ಯಾಧ್ಯಕ್ಷರನ್ನು ಬಿಜೆಪಿ ಮುಖಂಡರು ಸ್ವಾಗತಿಸಿದರು. ಈ ಸಂದರ್ಭ ಜಿಲ್ಲಾ ಉಸ್ತುವಾರ ಸಚಿವ ಕೆ.ಎಸ್.ಈಶ್ವರಪ್ಪ, ಸಂಸದ ಬಿ.ವೈ.ರಾಘವೇಂದ್ರ, ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್, ವಿಧಾನ ಪರಿಷತ್ ಸದಸ್ಯ ರುದ್ರೇಗೌಡ ಮತ್ತಿತರರು ಹಾಜರಿದ್ದರು.
previous post
next post