ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಕೇಂದ್ರ ಮತ್ತು ರಾಜ್ಯಸರಕಾರಗಳ ವಿರುದ್ಧ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಶನಿವಾರ ಪ್ರತಿಭಟನೆ ನಡೆಸಿದರು.
ಮಹಾವೀರ ಸರ್ಕಲ್ನಲ್ಲಿ ಜಿಲ್ಲಾಧ್ಯಕ್ಷ ಎಚ್.ಎಸ್.ಸುಂದರೇಶ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಮೂಲಕ ರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಸಿದರು.
ಅಗತ್ಯ ವಸ್ತುಗ ಬೆಲೆ ಗಗನಕ್ಕೇರಿದೆ. ಡೀಸೆಲ್ ಪೆಟ್ರೋಲ್ ಬೆಲೆ ಏರಿಕೆಯಾಗಿರುವುದರಿಂದ ಜನ ಸಾಮಾನ್ಯರ ಜನ ಜೀವನ ದುಸ್ತರವಾಗಿದೆ. ಅಡುಗೆ ಅನಿಲದ ಬೆಲೆ ಏರಿಕೆಯಾಗಿರುವುದರಿಂದ ಡವರ ಬದುಕು ಬರ್ಬರವಾಗಿದೆ. ಕೇಂದ್ರ ಸರಕಾರದ ದಿಕ್ಕುತಪ್ಪಿದ ಆಥರ್ಿಕ ನೀತಿಯಿಂದಾಗಿ ದೇಶದಲ್ಲಿ ಇಂತಹ ದುಸ್ತಿತಿ ಬಂದಿದೆ. ಸರಕಾರ ಬೆಲೆ ಏರಿಕೆಯನ್ನು ಕೂಡಲೇ ಹಿಂದೆ ಪಡೆಯಬೇಕೆಂದು ಪ್ರತಿಭಟನಾ ಕಾರರು ದೂರಿದರು.
ಪ್ರತಿಭಟನೆಯಲ್ಲಿ ಮುಖಂಡರಾದ ಇಸ್ಮಾಯಿಲ್ ಖಾನ್,ರವಿಕುಮಾರ್, ರಾಮೇಗೌಡ, ಶೇಷಾದ್ರಿ, ಸುವರ್ಣ ನಾಗರಾಜ್ ಮತ್ತಿತರರು ಭಾಗವಹಿಸಿದ್ದರು
previous post
next post