ಶಿಕ್ಷಣ ಇಲಾಖೆಗೆ ಸಂಬಂಧಿತ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮಹಾನಗರಪಾಲಿಕೆಯ ವಿರೋಧ ಪಕ್ಷದ ನಾಯಕರಾದ ಹೆಚ್ ಸಿ ಯೋಗೇಶ್ ಅವರ ನೇತೃತ್ವದಲ್ಲಿ ಮಹಾನಗರಪಾಲಿಕೆ ಕಾಂಗ್ರೆಸ್ ಪಕ್ಷದ ಸದಸ್ಯರು ಶಿಕ್ಷಣ ಸಚಿವರಾದ ಎಸ್ ಸುರೇಶ್ ಕುಮಾರ್ ಅವರಿಗೆ ಮನವಿ ಸಲ್ಲಿಸಿದರು.
ಜಿಲ್ಲೆಯಲ್ಲಿ ಶಿಕ್ಷಣ ಹಕ್ಕು ಯೋಜನೆಯಡಿ ಸುಮಾರು ೯ ಕೊಟಿ ರೂ. ಬಾಕಿ ಹಣ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಬಿಡುಗಡೆಯಾಗಬೇಕಿದ್ದು, ಅದನ್ನು ತಕ್ಷಣ ಬಿಡುಗಡೆ ಮಾಡಬೇಕು. ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಉಳಿದ ಅನುದಾನದಲ್ಲಿ ನಗರ ಪಾಲಿಕೆ ವ್ಯಾಪ್ತಿಯ ಸರಕಾರಿ ಶಾಲೆಗಳನ್ನು ಅಬಿವೃದ್ಧಿ ಮಾಡಬೇಕು. ಸ್ಮಾರ್ಟ್ ತರಗತಿ ನಡೆಸಲು ಶಿಕ್ಷಕರಿಗೆ ಹೆಚ್ಚುವರಿ ತಬೇತಿ ನೀಡಬೇಕು.
ಅನುದಾನ ರಹಿತ ಕಾಲೇಜುಗಳಲ್ಲಿ ಪ್ರಥಮ ಪಿಯುಸಿ ತರಗತಿಗಳು ನಡೆಯುತ್ತಿದ್ದು, ಸರಕಾರಿ ಮತ್ತು ಅನುದಾನಿತ ಕಾಲೇಜುಗಳಲ್ಲಿಯೂ ಸುರಕ್ಷತಾ ಕ್ರಮಗಳಡಿ ಕಾಲೇಜು ಆರಂಭಿಸಲು ಅವಕಾಶ ನೀಡಬೇಕು. ಅನುದಾನಿತ ಶಿಕ್ಷಣ ಸಂಸ್ಥೆಗಳು ಶಿಕ್ಷಕರ ನೇಮಕಾತಿಯನ್ನು ಸರ್ಕಾರವು ತಡೆಹಿಡಿದಿದ್ದು, ಇದರಿಂದ ಮಕ್ಕಳಿಗೆ ತೊಂದರೆಯಾಗುತ್ತಿದೆ ಇದರಿಂದ ಮಕ್ಕಳ ಭವಿಷ್ಯಕ್ಕೆ ತೊಂದರೆಯಾಗುತ್ತಿರುವುದರಿಂದ ತಕ್ಷಣ ಶಿಕ್ಷಕರನ್ನು ನೇಮಿಸಬೇಕು. ರಾಜ್ಯದ ಬಹಳಷ್ಟು ಖಾಸಗಿ ಶಿಕ್ಷಣ ಸಂಸ್ಥೆ ೩ ರಿಂದ ೪ ಲಕ್ಷ ಶುಲ್ಕವನ್ನು ತೆಗೆದುಕೊಳ್ಳುತ್ತಿದ್ದು, ಇದಕ್ಕೆ ಕಡಿವಾಣ ಹಾಕಬೇಕು ಸರ್ಕಾರ ಏಕ ರೂಪದ ಶುಲ್ಕವನ್ನು ನಿಗಧಿಪಡಿಸಬೇಕೆಂದು ಮನವಿ ಸಲ್ಲಿಸಲಾಯಿತು. ಮಹಾನಗರ ಪಾಲಿಕೆ ಸದಸ್ಯರಾದ ಮಂಜುಳಾ ಶಿವಣ್ಣ, ರೇಖಾ ರಂಗನಾಥ್ ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರಾದ ರಂಗೇಗೌಡರು, ಮಾಲ್ತೇಶ್ ಹಾಗೂ ಪವನ್ ಇದ್ದರು.
previous post