ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಮಂಗಳವಾರ ಶಿವಮೊಗ್ಗದಲ್ಲಿ ಸ್ಮಾರ್ಟ್ ಸಿಟಿ ಯೋಜನೆ ಅಡಿ ನಿರ್ಮಿಸಿರುವ ಸ್ಮಾರ್ಟ್ ಕೊಠಡಿಗಳನ್ನು ವೀಕ್ಷಿಸಿದರು.ದುರ್ಗಿಗುಡಿ ಸರಕಾರಿ ಶಾಲೆಯ ಸ್ಮಾರ್ಟ್ ಕೊಠಡಿಗೆ ಭೇಟಿ ನೀಡಿದ್ದ ಸಂದರ್ಭ ಮಹಾನಗರ ಪಾಲಿಕೆ ಹಾಗೂ ಸ್ಮಾರ್ಟ್ ಸಿಟಿ ಯೋಜನೆ ಕಮೀಷನರ್ ಆದ ಚಿದಾನಂದ ವಟಾರೆ ಅವರು, ಸ್ಮಾರ್ಟ್ ಬೋರ್ಡ್‌ನಿಂದ ವಿದ್ಯಾರ್ಥಿಗಳಿಗಿರುವ ಸೌಲಭ್ಯಗಳನ್ನು ವಿವರಿಸಿದರು. ಸಚಿವ ಸುರೇಶ್ ಕುಮಾರ್ ಅವರು, ಪ್ರತಿಯೊಬ್ಬ ಮಕ್ಕಳಿಗೂ ಮುಂದುವರಿದ ತಂತ್ರಜ್ಞಾನದ ಲಾಭ ಸಿಗಬೇಕು. ಸರಕಾರಿ ಶಾಲೆಯಲ್ಲಿ ಕಲಿಯುವ ಮಕ್ಕಳು ಯಾವುದರಲ್ಲೂ ಹಿಂದುಳಿಯಬಾರದು. ಸರಕಾರಿ ಶಾಲೆಯಲ್ಲಿ ಅಳವಡಿಸಿರುವ ಸ್ಮಾರ್ಟ್ ಬೋರ್ಡ್ ಮತ್ತು ಸ್ಮಾರ್ಟ್ ಕೊಠಡಿಗಳಿಂದ ಎಲ್ಲರಿಗೂ ಪ್ರಯೋಜನ ಆಗಲಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್‌ಈಶ್ವರಪ್ಪ, ಮಹಾನಗರ ಪಾಲಿಕೆ ಮೇಯರ್ ಸುವರ್ಣಶಂಕರ್, ಉಪಮೇಯರ್ ಸುರೇಖಾ ಮುರಳೀಧರ್, ಎಡಿಸಿ ಅನುರಾಧಾ, ಪಾಲಿಕೆ ಸದಸ್ಯ ಚನ್ನಬಸಪ್ಪ, ಆರ್ಯವೈಶ್ಯ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಡಿ.ಎಸ್.ಅರುಣ್, ಮತ್ತಿತರರು ಇದ್ದರು,
previous post
next post