ಬಡತನವೇ ಮಕ್ಕಳ ಶಿಕ್ಷಣಕ್ಕೆ ಶಾಪವಾಗಬಾರದು ಎಂಬ ಕಾರಣಕ್ಕೆ ಶಿವಮೊಗ್ಗ ನಗರದ ಶಾಲೆಗಳಲ್ಲಿ ಆಧುನಿಕ ಸೌಲಭ್ಯ ಕಲ್ಪಿಸಲಾಗಿದೆ. ಸ್ಮಾರ್ಟ್ ಕ್ಲಾಸ್ ಮೂಲಕ ಮಕ್ಕಳಿಗೆ ಯಾವುದೇ ಖಾಸಗಿ ಶಾಲೆಗಳಿಗೂ ಕಡಮೆ ಇಲ್ಲದಂತೆ ಸರಕಾರಿ ಶಾಲೆ ಮಕ್ಕಳು ಶಿಕ್ಷಣ ಪಡೆಯಬಹುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.
ಶಿವಮೊಗ್ಗ ಕುವೆಂಪು ರಂಗಮಂದಿರಲ್ಲಿ ಆಯೋಜಿಸಿದ್ದ ಶಿಕ್ಷಣ ಸಂವಾದದಲ್ಲಿ ಅವರು ಮಾತನಾಡಿದರು. ವಿವಿಧ ಮೂಲಗಳಿಂದ ಅನುದಾನ ತಂದು ಶಿವಮೊಗ್ಗದ ೮೭ ಸರಕಾರಿ ಶಾಲೆಗಳನ್ನು ಅಭಿವೃದ್ಧಿ ಪಡಿಸಲಾಗಿದೆ. ಶಾಲೆಗಳಲ್ಲಿ ಶೌಚಾಲಯ ನಿರ್ಮಾಣಕ್ಕೆ ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ನೆರವು ನೀಡಲು ಅವಕಾಶ ಇದೆ. ಶಾಲೆಗಳ ಮುಖ್ಯಸ್ಥರು ಮನವಿ ಸಲ್ಲಿಸಿದರೆ ಈ ಕೆಲಸ ಮಾಡಿಕೊಡಲಾಗುವುದು ಎಂದು ಹೇಳಿದರು
ಶಿಕ್ಷಣ ಸಚಿವ ಸುರೇಶ್ ಕುಮಾರ್ ಮಾತನಾಡಿ, ಶಿವಮೊಗ್ಗದ ಸರಕಾರಿ ಶಾಲೆಗಳನ್ನು ಹೈಟೆಕ್ ಮಾಡುವಲ್ಲಿ ಸಚಿವ ಈಶ್ವರಪ್ಪ ಅವರ ಆಸಕ್ತಿ ಪ್ರಮುಖ ಕಾರಣವಾಗಿದೆ. ಶಾಲೆ ಮಕ್ಕಳ ಮೇಲಿನ ಕಾಳಜಿಯಿಂದ ಈ ಕೆಲಸ ಆಗಿದೆ. ಜೂನ್ ತಿಂಗಳಲ್ಲಿ ಹತ್ತನೇ ತರಗತಿ ಪರೀಕ್ಷೆ ನಿಗದಿಯಾಗಿದ್ದು, ಮಕ್ಕಳು ಶ್ರದ್ಧೆಯಿಂದ ಓದಿ ಯಶಸ್ಸು ಗಳಿಸಬೇಕು ಎಂದು ಸಲಹೆ ನೀಡಿದರು.
ಮೇಯರ್ ಸುವರ್ಣಶಂಕರ್, ಉಪಮೇಯರ್ ಸುರೇಖಾ ಮುರಳೀಧರ್, ಡಿಡಿಪಿಐ ರಮೇಶ್, ಡಿ.ಎಸ್.ಅರುಣ್, ಎನ್.ಇ.ಎಸ್ ಅಧ್ಯಕ್ಷ ಅಶ್ವತ್ಥನಾರಾಯಣ್ ಶೆಟ್ಟಿ, ಡಿವಿಎಸ್ ಅಧ್ಯಕ್ಷ ಬಸಪ್ಪಗೌಡ, ನಗರಪಾಲಿಕೆ ಸದಸ್ಯ ಚನ್ನಬಸಪ್ಪ ಮೊದಲಾದವರಿದ್ದರು.
previous post