ಗಂಗಾ ಕಲ್ಯಾಣ ಬೋರ್‌ವೆಲ್‌ಗೆ ಟಿ.ಸಿ ಹಾಕಲು 5 ಸಾವಿರ ಲಂಚದ ಬೇಡಿಕೆ ಇಟ್ಟಿದ್ದ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಬಿ.ಎಸ್.ಪ್ರಕಾಶ್ ಅವರು ಎಸಿಬಿ ಬಲೆಗೆ ಬಿದ್ದಿದ್ದಾರೆ.
ಭದ್ರಾವತಿ ತಾಲೂಕು ಆನವೇರಿಯ ಹರೀಶ್ ಎನ್. ಎಂಬುವರು ಪ್ರಕಾಶ್ ವಿರುದ್ಧ ಎಸಿಬಿಗೆ ದೂರು ಸಲ್ಲಿಸಿದ್ದರು. ದೂರು ದಾಖಲಿಸಿಕೊಂಡಿದ್ದ ಎಸಿಬಿ ಪೊಲೀಸರ್ ಗುರುವಾರ ಹೊಳೆಹೊನ್ನೂರಿನ ತಮ್ಮ ಕಚೇರಿಯಲಿ ಲಂಚ ಸ್ವೀಕರಿಸುವಾಗ ಬಂಧಿಸಿ ಕಾನೂನು ಕ್ರಮ ಕೈಗೊಂಡಿದ್ದಾರೆ. ಎಸಿಬಿ ಡೈವೈಎಸ್ಪಿ ಲೋಕೇಶ್ ಮಾರ್ಗದರ್ಶನದಲ್ಲಿ ನಡೆದ ದಾಳಿಯಲ್ಲಿ ಸಿಪಿಐ ಇಮ್ರಾನ್ ಬೇಗ್, ಸಿಬ್ಬಂದಿಗಳಾದ ವಸಂತ,ರಘುನಾಯ್ಕ, ನಾಗರಾಜ್, ಸುರೇಂದ್ರ, ಯೋಗೇಶಪ್ಪ, ಹರೀಶ್, ಶ್ರೀನಿವಾಸ್ ಭಾಗವಹಿಸಿದ್ದರು.
previous post
next post