Malenadu Mitra
ರಾಜ್ಯ ಶಿವಮೊಗ್ಗ

ಶಿವಮೊಗ್ಗ ನಾಗರಾಜ್ ಛಾಯಾಚಿತ್ರ ಪ್ರದರ್ಶನ

ಜನವರಿ 31ರ ನಾಳೆಯಿಂದ ಶಿವಮೊಗ್ಗ ಗೋಪಿಶೆಟ್ಟಿಕೊಪ್ಪ ಸಾಹಿತ್ಯ ಗ್ರಾಮದ ಸಾಹಿತ್ಯ ಭವನದಲ್ಲಿ ನಡೆಯಲಿರುವ ಜಿಲ್ಲಾ ಸಾಹಿತ್ಯ ಸಮ್ಮೇಳನಕ್ಕೆ ವಿಶೇಷ ಮೆರಗು ಎಂಬಂತೆ ಪತ್ರಿಕಾ ಛಾಯಾಗ್ರಾಹಕ ಶಿವಮೊಗ್ಗ ನಾಗರಾಜ್ ಅವರಿಂದ ಮೂರು ದಿನಗಳ ಕಾಲ ಏಕವ್ಯಕ್ತಿ ಛಾಯಚಿತ್ರ ಪ್ರದರ್ಶನ ನಡೆಯಲಿದೆ.

ಛಾಯಾಚಿತ್ರ ಸ್ಪರ್ಧೇಯಲ್ಲಿ ಅಂತರಾಷ್ಟ್ರೀಯ ಹಾಗೂ ರಾಷ್ಟ್ರೀಯ ಮಟ್ಟದ ಹತ್ತು ಹಲವು ಪ್ರಶಸ್ತಿಗಳನ್ನು ಪಡೆದಿರುವ ಪತ್ರಿಕಾ ಛಾಯಾಗ್ರಾಹಕ  ಛಾಯಾಗ್ರಹಣ ವಿಷಯದಲ್ಲಿ ಒಂದಿಷ್ಟು ಹೊಸತನವನ್ನು ಆಯ್ಕೆಮಾಡಿಕೊಂಡಿದ್ದಾರೆ. ನಾಗರಾಜ್  ಅವರ ಅಪರೂಪದ ಪ್ರಾಣಿ ಪಕ್ಷಿ ಹಾಗೂ ಗ್ರಾಮೀಣ ಚಿತ್ರಗಳನ್ನು ಪ್ರದರ್ಶಿಸಲಿದ್ದಾರೆ. ಹಲವು ವರ್ಷಗಳಿಂದ ಪತ್ರಿಕಾ ಛಾಯಾಗ್ರಾಹಕರಾಗಿ ಸೇವೆಸಲ್ಲಿಸುತ್ತಿರುವ ನಾಗರಾಜ್ ಪ್ರತಿವರ್ಷ ಶಾಲಾ-ಕಾಲೇಜುಗಳ ಕಾರ್ಯಕ್ರಮ, ಕನ್ನಡ ಸಾಹಿತ್ಯ ಸಮ್ಮೇಳನದ ವಿಶೇಷ ಕಾರ್ಯಕ್ರಮಗಳಲ್ಲಿ ಹಾಗೆಯೇ ಶಿವಮೊಗ್ಗ ಜಿಲ್ಲೆಯ ಜನಮಾನಸದಲ್ಲಿ ಉಳಿಯುವಂತಹ ಕಾರ್ಯಕ್ರಮಗಳಲ್ಲಿ ತಮ್ಮ ಅಪರೂಪದ ಚಿತ್ರಗಳನ್ನು ಪ್ರದರ್ಶಿಸುತ್ತಿದ್ದಾರೆ.  ಅವರ ಈ ಛಾಯಾಚಿತ್ರ ಪ್ರದರ್ಶನ ಜಿಲ್ಲಾ ಸಾಹಿತ್ಯ ಸಮ್ಮೇಳನಕ್ಕೊಂದು ವಿಶೇಷ ಮೆರಗು.

Ad Widget

Related posts

ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ವಲಯ ಘೋಷಣೆಗೆ ರಾಜ್ಯ ಸರ್ಕಾರದ ವಿರೋಧ: ಕೇಂದ್ರಕ್ಕೆ ಸ್ಪಷ್ಟಪಡಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Malenadu Mirror Desk

ಪಾದಯಾತ್ರೆಯಲ್ಲಿ ಸಾಗರದ ಕಾಂಗ್ರೆಸ್ ಕಾರ್ಯಕರ್ತ ಸಾವು

Malenadu Mirror Desk

ರಾಜ್ಯದಲ್ಲಿ ಬಾಣಂತಿಯರ ಸರಣಿ ಸಾವು: ಸರ್ಕಾರದ ಕ್ರಮವನ್ನ ಪ್ರಶ್ನಿಸಿದ ಡಾ.ಸರ್ಜಿ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.