Malenadu Mitra
ಆರೋಗ್ಯರಾಜ್ಯ

ಕೌಟುಂಬಿಕ ಕಲಹ ಹೆಚ್ಚಿಸಿದ ಕೊರೊನ!

ದೇಶದಲ್ಲಿ ಕೊರೊನ ಸೋಂಕು ನಿಯಂ ತ್ರಿಸುವಲ್ಲಿ ಸರ್ಕಾರ ಘೋಷಿಸಿದ ಲಾಕ್‌ಡೌನ್ ಅವಧಿಯಲ್ಲಿ ಜಿಲ್ಲೆಯ ಸಾಂತ್ವನ ಕೇಂದ್ರಗಳಲ್ಲಿ ದಾಖಲಾದ ಕೌಟುಂಬಿಕ ದೌರ್ಜನ್ಯ ಪ್ರಕರಣ ಗಳು ಅತ್ಯಂತ ಹೆಚ್ಚಾಗಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಂ. ಎಲ್.ವೈಶಾಲಿ ಹೇಳಿದರು.
ಅವರು ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಏರ್ಪಡಿಸಲಾ ಗಿದ್ದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಅನುಷ್ಠಾನಗೊಳ್ಳುತ್ತಿರುವ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಈ ಅವಧಿಯಲ್ಲಿ ಕೌಟುಂಬಿಕ ವ್ಯವಸ್ಥೆ ಸಾಮರಸ್ಯದಿಂದ ಕೂಡಿರಬೇಕಾಗಿತ್ತು. ಬದಲಾಗಿ ಒಟ್ಟು ಕುಟುಂಬದ ವಾತಾವರಣ ಕಲುಶಿತವಾಗು ತ್ತಿರುವುದು ಬೇಸರವೆನಿಸಿದೆ. ಅರ್ಥಿಕ ಸಂಕಷ್ಟ ಹಾಗೂ ಮದ್ಯವ್ಯಸನ ಮುಂತಾದ ಸಮಸ್ಯೆಗಳನ್ನು ದಾಖಲಾದ ದೂರುಗಳಲ್ಲಿ ಪ್ರಮುಖವಾಗಿ ಗುರುತಿಸಲಾಗಿದೆ ಎಂದರು.
ಸಾಂತ್ವನ ಕೇಂದ್ರಗಳು ದಿನದ ೨೪ಗಂಟೆ ಗಳೂ ಕಾರ್ಯನಿರ್ವಹಿಸಬೇಕು. ಕೆಲವು ಕೇಂದ್ರಗಳು ನಿಯಮಾನುಸಾರ ಕಾರ್ಯನಿರ್ವ ಹಿಸದಿರುವ ಬಗ್ಗೆ ದೂರುಗಳು ಬರುತ್ತಿವೆ. ಮುಂದಿನ ದಿನಗಳಲ್ಲಿ ಸಾಂತ್ವನ ಕೇಂದ್ರಗಳಿಗೆ ಖುದ್ದು ಭೇಟಿ ನೀಡಿ ಕಾರ್ಯ ಪರಿಶೀಲಿಸಲಾ ಗುವುದು ಎಂದರು.
ವರದಕ್ಷಿಣೆ ಕಿರುಕುಳ, ಅತ್ಯಾಚಾರ, ಲೈಂಗಿಕ ಕಿರುಕುಳ, ದೌರ್ಜನ್ಯ ಹಾಗೂ ಇನ್ನಿತರ ರೀತಿಯ ದೌರ್ಜನ್ಯಕ್ಕೆ ಒಳಗಾದ ಮಹಿಳೆಯರು ದೈಹಿಕ ವಾಗಿ ಹಾಗೂ ಮಾನಸಿಕವಾಗಿ ಹಿಂಸೆಯನ್ನು ಅನುಭವಿಸುತ್ತಿರುವ ಮಹಿಳೆಯರಿಗೆ ಕಾನೂನು ಸಲಹೆ, ಆರ್ಥಿಕ ಪರಿಹಾರ, ತಾತ್ಕಾಲಿಕ ಆಶ್ರಯ, ರಕ್ಷಣೆ ನೀಡುವುದರ ಜೊತೆಗೆ ಸ್ವಪ್ರೇರಣೆಯಿಂದ ತಮ್ಮ ಕಾಲು ಮೇಲೆ ತಾವು ನಿಲ್ಲಲು ಅನುಕೂಲವಾಗುವಂತೆ ತರಬೇತಿ ನೀಡುವುದರೊಂದಿಗೆ ಇಂತಹ ಸಂತ್ರಸ್ಥ ಮಹಿಳೆಯರಿಗೆ ಸಮಾಜದಲ್ಲಿ ಇತರೆ ಮಹಿಳೆಯರಂತೆ ದೈರ್ಯವಾಗಿ ಬದುಕುವಂತೆ ಸಶಕ್ತರನ್ನಾಗಿ ಮಾಡುವ ಅಗತ್ಯವಿದೆ ಎಂದರು.
ಜಿಲ್ಲಾ ಪಂಚಾಯಿತಿ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ವೀರಭದ್ರಪ್ಪ ಪೂಜಾರಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ರಾಜೇಶ್ ಸುರಗೀಹಳ್ಳಿ, ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಸಿ.ಸುರೇಶ್(ಪ್ರಭಾರ), ಸಂರಕ್ಷಣಾಧಿಕಾರಿ ಗಂಗೀಬಾಯಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಂರಕ್ಷಣಾಧಿಕಾರಿಗಳು, ಸಾಂತ್ವನ ಮಹಿಳಾ ಸಹಾಯವಾಣಿ ಕೇಂದ್ರಗಳ ಸಮಾಲೋಚಕರು, ಎಲ್ಲಾ ತಾಲೂಕುಗಳ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಉಪಸ್ಥಿತರಿದ್ದರು.

ಜಿಲ್ಲೆಯಲ್ಲಿ ಫೋಕ್ಸೋ ಕಾಯ್ದೆಯಡಿ ೩೦೦ಕ್ಕೂ ಹೆಚ್ಚಿನ ಪ್ರಕರಣಗಳು ನ್ಯಾಯಾಲಯದಲ್ಲಿ ದಾಖಲಾಗಿರುವುದು ಕಳವಳಕಾರಿ ಸಂಗತಿಯಾಗಿದೆ. ಈ ಕಾಯ್ದೆಯಡಿ ಸಂತ್ರಸ್ಥ ಮಹಿಳೆಗೆ ಸಕಾಲದಲ್ಲಿ ಕಾನೂನು ಮತ್ತು ಸಾಮಾಜಿಕ ರಕ್ಷಣೆ ಒದಗಿಸಿ, ಕ್ರೌರ್ಯಕ್ಕೆ ಕಾರಣರಾದ ವ್ಯಕ್ತಿಗಳನ್ನು ನಿಯಮಾನುಸಾರ ಕಾನೂನು ಕ್ರಮಕ್ಕೆ ಒಳಪಡಿಸುವಲ್ಲಿ ಸಂಬಂಧಿತ ಇಲಾಖೆಗಳ ಅಧಿಕಾರಿಗಳು ಕ್ರಮವಹಿಸಬೇಕಾದ ತುರ್ತು ಅಗತ್ಯವಿದೆ. ಇಂತಹ ಸಂದಿಗ್ಧ ಅವಧಿಯಲ್ಲಿ ಸಂತ್ರಸ್ಥೆಯನ್ನು ಹಿಂಸಿಸುವ, ಮಾನಸಿಕ ಸ್ಥೈರ್ಯವನ್ನು ಕುಗ್ಗಿಸದಂತೆ ನೋಡಿಕೊಳ್ಳುವ ಹಾಗೂ ಸಾಮಾಜಿಕವಾಗಿ ಅವರನ್ನು ಪರಿಚಯಿಸದಂತೆ ಗೌಪ್ಯತೆ ಕಾಪಾಡಿಕೊಳ್ಳುವ ಅಗತ್ಯವಿದೆ.

ಕೆ.ಎನ್.ಸರಸ್ವತಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ

Ad Widget

Related posts

ದುರಹಂಕಾರ, ದೌಲತ್ತಿನ ಅಭ್ಯರ್ಥಿಗಳನ್ನು ದೂರವಿಡಿ: ಹೆಚ್.ಡಿ.ಕುಮಾರಸ್ವಾಮಿ, ಸೊರಬದಲ್ಲಿ ಜೆಡಿಎಸ್ ಅಭ್ಯರ್ಥಿಪರ ಪ್ರಚಾರ

Malenadu Mirror Desk

ನನ್ನ ಸೋಲಿಗೆ ಕಾಂಗ್ರೆಸ್‌ನ ಗ್ಯಾರಂಟಿ ಕಾರ್ಡ್ ಕಾರಣ ; ಹರತಾಳು ಹಾಲಪ್ಪ

Malenadu Mirror Desk

ಕೆಲಸಗಳು ಉತ್ತಮ ಗುಣಮಟ್ಟದಾಗಿರಲಿ : ಬಿ. ವೈ ರಾಘವೇಂದ್ರ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.