Malenadu Mitra
ರಾಜ್ಯ ಶಿವಮೊಗ್ಗ

ಪದವೀಧರ ಸಹಕಾರ ಸಂಘದ ಸುವರ್ಣ ಮಹೋತ್ಸವ

ಸದಸ್ಯರಿಗೆ ವಿವಿಧ ಕ್ರೀಡೆ, ಸಾಂಸ್ಕೃತಿಕ ಸ್ಪರ್ಧೆಗಳು
ಶಿವಮೊಗ್ಗ ಪದವೀಧರ ಸಹಕಾರ ಸಂಘದ ಸುವರ್ಣ ಮಹೋತ್ಸವದ ಅಂಗವಾಗಿ ಸದಸ್ಯರಿಗೆ ಕ್ರೀಡೆ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಫೆಬ್ರವರಿ ೧೧ ರಿಂದ ೧೩ ರವರೆಗೆ ಕ್ರೀಡೆ ಹಾಗೂ ೨೦ ಮತ್ತು ೨೧ ರಂದು ಸಾಂಕೃತಿಕ ಸ್ಪರ್ಧೆಗಳು ನಡೆಯಲಿವೆ.
ಸಂಘದ ಅಧ್ಯಕ್ಷ ಎಸ್.ಪಿ.ದಿನೇಶ್ ಅವರು ಬುಧವಾರ ಶಿವಮೊಗ್ಗದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು. ಪದವೀಧರ ಸಹಕಾರ ಸಂಘ ೧೯೭೧ ರಲ್ಲಿ ಚಿಕ್ಕ ಕೊಠಡಿಯಲ್ಲಿ ಆರಂಭವಾಗಿ ಇಂದು ೬೫೦೦ ಸದಸ್ಯರನ್ನು ಹೊಂದಿದೆ. ಸುವರ್ಣ ಮಹೋತ್ಸವದ ಸವಿನೆನಪಿಗಾಗಿ ಸದಸ್ಯರನ್ನು ಒಂದೆಡೆ ಸೇರಿಸಿ ಸಂಭ್ರಮಿಸುವುದು ಉಚಿತ ಎಂಬ ನಿರ್ಧಾರಕ್ಕೆ ಬಂದ ಆಡಳಿತ ಮಂಡಳಿ ಈ ಸ್ಪರ್ಧೆಗಳನ್ನು ನಡೆಸುತ್ತಿದೆ ಎಂದು ಹೇಳಿದರು.
ವಿವಿಧ ವಯೋಮಾನದ ಸದಸ್ಯರಿಗೆ ಹಲವು ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ. ಕ್ರಿಕೆಟ್,ವಾಲಿಬಾಲ್ .ಟೇಬಲ್ ಟೆನ್ನಿಸ್ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಮಹಿಳೆಯರಿಗೆ ಥ್ರೋಬಾಲ್,ಟೇಬಲ್ ಟೆನ್ನಿಸ್ ಕ್ರೀಡೆ ಆಯೋಜಿಸಲಾಗಿದೆ. ಪುರುಷ ಮತ್ತು ಮಹಿಳಾ ಸದಸ್ಯರಿಗೆ ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ ಎಂದು ದಿನೇಶ್ ಹೇಳಿದರು.
ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ
ಸುವರ್ಣ ಮಹೋತ್ಸವ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಆಹ್ವಾನಿಸಲಾಗುವುದು. ಅವರ ದಿನಾಂಕ ಸಿಕ್ಕ ಬಳಿಕ ಕಾರ್ಯಕ್ರಮ ನಿಗದಿ ಮಾಡಲಾಗುವುದು. ಸಮಾರಂಭದ ವಿವಿಧ ಕ್ಷೇತ್ರದ ಗಣ್ಯರನ್ನು ಆಹ್ವಾನಿಸಲಾಗುವುದು. ಕಾರ್ಯಕ್ರಮದ ಯಶಸ್ಸಿಗೆ ಆಡಳಿತ ಮಂಡಳಿಯಲ್ಲಿ ವಿವಿಧ ಸಮಿತಿಗಳನ್ನು ನೇಮಕ ಮಾಡಲಾಗಿದೆ. ಶಿವಮೊಗ್ಗ ನಗರಕ್ಕೆ ಸೀಮಿತವಾಗಿ ಕೋ ಆಪರೇಟಿವ್ ಸೊಸೈಟಿಗಳ ತಂಡಗಳ ನಡುವೆ ಕ್ರಿಕೆಟ್ ಪಂದ್ಯಾವಳಿ ನಡೆಸುವ ಉದ್ದೇಶವಿದೆ ಎಂದು ದಿನೇಶ್ ಹೇಳಿದರು.
ಉಪಾಧ್ಯಕ್ಷೆ ಮಮತಾ, ನಿರ್ದೇಶಕರಾದ ಪ್ರಸನ್ನ, ರುದ್ರೇಶ್, ಸುರೇಶ್, ಶಶಿಕುಮಾರ್ ಸೇರಿದಂತೆ ಹಲವರು ಭಾಗವಹಿಸಿದ್ದರು.

Ad Widget

Related posts

ಸಿದ್ದರಾಮಯ್ಯ ಹತಾಶರಾಗಿದ್ದಾರೆ: ಕಟೀಲು

Malenadu Mirror Desk

ಶಿವಮೊಗ್ಗದಲ್ಲಿ ಎರಡಂಕಿಗಿಳಿದ ಸೋಂಕು, 4 ಸಾವು

Malenadu Mirror Desk

ಶಿವಮೊಗ್ಗದಲ್ಲಿ 13 ಸಾವು, ಸೋಂಕು 692

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.