Malenadu Mitra
ರಾಜ್ಯ ಶಿವಮೊಗ್ಗ

ರಾಜ್ಯದ ಎಲ್ಲಾ ಕ್ವಾರಿಗಳ ಸರ್ವೇಗೆ ಹೈಕೋರ್ಟ್ ಸೂಚನೆ

ಶಿವಮೊಗ್ಗ ಕಲ್ಲು ಗಣಿಗಾರಿಕೆ ಪ್ರದೇಶದಲ್ಲಿ ನಡೆದ ಸ್ಪೋಟ ಪ್ರಕರಣ ಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳ ವಿರುದ್ಧ ಕ್ರಮ ಕೋರಿ ಡಾ ಕೆ ಬಿ ವಿಜಯ್ ಕುಮಾರ್ ಹೈಕೋರ್ಟ್ ಗೆ ಪಿಐಎಲ್ ಸಲ್ಲಿಸಿದ್ದರು. ಈ ಸಂಬಂಧ ಅರ್ಜಿ ವಿಚಾರಣೆ ನಡೆಸಿದ ಸಿಜೆ ಎ ಎನ್ ಒಕಾ ಹಾಗೂ ನ್ಯಾಯಾಧೀಶ ಸಚಿನ್ ಶಂಕರ್ ಮಗದುಮ್ ರಾಜ್ಯದ ಎಲ್ಲಾ ಕ್ವಾರಿಗಳ ಸರ್ವೆ ನಡೆಸಿ ವರದಿ ನೀಡುವಂತೆ ಸರ್ಕಾರಕ್ಕೆ ಕೋರ್ಟ್ ಸೂಚನೆ ನೀಡಿದೆ.

ರಾಜ್ಯದಲ್ಲಿ ನಡೆಯುತ್ತಿರುವ ಕ್ವಾರಿಗಳಲ್ಲಿ ಸುರಕ್ಷತಾ ಕ್ರಮ ತೆಗೆದುಕೊಳ್ಳಲಾಗುತ್ತಿದೆಯೋ,ನಿಯಮ ಪಾಲಿಸದ ಕ್ವಾರಿಗಳ ಮೇಲೆ ಕೈಗೊಂಡ ಕ್ರಮವೇನು..? ಈ ಬಗ್ಗೆ 1 ತಿಂಗಳುಗಳ ವರದಿ ನೀಡಲು ಕೋರ್ಟ್ ಸರ್ಕಾರಕ್ಕೆ ಸೂಚನೆ ನೀಡಿದೆ. ಈ ಸಂಬಂಧ ಕೋರ್ಟ್ ಪ್ರಶ್ನೆಗೆ ಉತ್ತರ ನೀಡಿದ ಸರ್ಕಾರ ಪರ ವಕೀಲರು ಈಗಾಗಲೇ ಡ್ರೋಣ್ ಸರ್ವೆ ನಡೆಸುತ್ತಿರುವುದಾಗಿ ತಿಳಿಸಿದರು.
ರಾಜ್ಯದಲ್ಲಿ ಅಕ್ರಮ ಗಣಿಗಾರಿಕೆ ಪ್ರಕರಣಗಳು ಹೆಚ್ಚುತ್ತಿದ್ದು, ಕ್ವಾರಿಯಿಂದ ಪರಿಸರದ ಮೇಲೆ ದುಷ್ಪರಿಣಾಮವಾಗುತ್ತಿರುವ ಬಗ್ಗೆ ಜನರ ದೂರು ಪರಿಗಣಿಸಲು ಸೂಕ್ತ ವ್ಯವಸ್ಥೆ ರೂಪಿಸಲು ಸರ್ಕಾರಕ್ಕೆ ಕೋರ್ಟ್ ಸೂಚನೆ ನೀಡಿದೆ. ಜಿಲ್ಲೆಯ ಹುಣಸೋಡ ಕಲ್ಲು ಕಲ್ಲು ಗಣಿಗಾರಿಕೆ ಪ್ರದೇಶದಲ್ಲಿ ಜಿಲೆಟಿನ್ ತುಂಬಿದ್ದ ಲಾರಿ ಸ್ಪೋಟಗೊಂಡ ಪರಿಣಾಮ 8 ಕಾರ್ಮಿಕರು ಮೃತಪಟ್ಟಿದ್ದರು.

Ad Widget

Related posts

ತುಂಗಾ ಸೇತುವೆಯಿಂದ ಹೊಳೆಗೆ ಹಾರಿದ ಯುವಕ, ಅದೃಷ್ಟವಶಾತ್ ಬದುಕುಳಿದ ಯುವಕನ ರಕ್ಷಣೆ ಮಾಡಿದ ಅಗ್ನಿಶಾಮಕ ಸಿಬ್ಬಂದಿ

Malenadu Mirror Desk

ಮದರಸಾಗಳನ್ನು ಬ್ಯಾನ್ ಮಾಡಬೇಕು: ಈಶ್ವರಪ್ಪ

Malenadu Mirror Desk

ಶ್ರೀರಾಮನ ಆದರ್ಶಗಳು ಸಮಾಜಕ್ಕೆ ಮಾರ್ಗದರ್ಶನ, ಧಾರ್ಮಿಕ,ರಾಜಕೀಯ ಕ್ಷೇತ್ರದಲ್ಲಿ ಮೌಲ್ಯಗಳಿಗಿಲ್ಲ ಮಹತ್ವ: ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.