Malenadu Mitra
ರಾಜ್ಯಶಿವಮೊಗ್ಗ

ರೈಲ್ವೆ ಯೋಜನೆಗಳಿಗೆ 112 ಕೋಟಿ ಅನುದಾನ

ಶಿವಮೊಗ್ಗ ಜಿಲ್ಲೆಯ ರೈಲ್ವೆ ಯೋಜನೆಗಳಿಗೆ ಈ ಬಾರಿಯ ಕೇಂದ್ರ ಬಜೆಟ್‌ನಲ್ಲಿ 112 ಕೋಟಿ ರೂ. ಮೀಸಲಿಡಲಾಗಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಶಿವಮೊಗ್ಗ-ಶಿಕಾರಿಪು-ರಾಣೆಬೆನ್ನೂರು ಮಾರ್ಗಕ್ಕೆ ಈ ಬಾರಿ 100 ಕೋಟಿ ರೂ. ಅನುದಾನ ಮೀಸಲಿರಿಸಲಾಗಿದೆ. ಕೇಂದ್ರ ರೈಲ್ವೆ ಸಚಿವರೊಂದಿಗೆ ನಿರಂತರ ಸಂಪರ್ಕ ಸಾಧಿಸಿ ಮನವಿ ಮಾಡಿರುವ ಹಿನ್ನೆಲೆಯಲ್ಲಿ ಈ ನೆರವು ನೀಡಲಾಗಿದೆ. ಅದೇ ರೀತಿ ಶಿವಮೊಗ್ಗ ಸಮೀಪದ ಕೋಟೆಗಂಗೂರಿನಲ್ಲಿ ರೈಲ್ವೆ ಕೋಚಿಂಗ್ ಸೆಂಟರ್‌ನ ಕಾಮಗಾರಿಗೆ ಭೂ ಸ್ವಾಧೀನ ಪ್ರಕ್ರಿಯೆ ನಡೆಯುತ್ತಿದೆ. ಕಳೆದ ಸಾಲಿನ ಬಜೆಟ್‌ನಲ್ಲಿ ಈ ಯೋಜನೆಗೆ ಅನುದಾನ ನೀಡಲಾಗಿತ್ತು. ಈ ಬಾರಿಯ ಬಜೆಟ್‌ನಲ್ಲಿ ಈ ಯೋಜನೆಗೆ 12 ಕೋಟಿ ಅನುದಾನ ನೀಡಲಾಗಿದೆ ಎಂದು ಹೇಳಿರುವ ಸಂಸದರು ರೈಲ್ವೆ ಸಚಿವರು ಹಾಗೂ ಹಣಕಾಸು ಸಚಿವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

Ad Widget

Related posts

ಜಿಲ್ಲಾ,ತಾಲೂಕು ಪಂಚಾಯಿತಿ ಮೀಸಲು ಪ್ರಕಟ: ಕಾಂತೇಶ್, ಕಲಗೋಡು, ಸುರೇಶ್ ಸ್ವಾಮಿರಾವ್‍ಗೆ ಕ್ಷೇತ್ರವಿಲ್ಲ

Malenadu Mirror Desk

ಶಿಕ್ಷಣ ವ್ಯವಸ್ಥೆಯಲ್ಲಿ ಮಲೆನಾಡು ಗ್ರಾಮೀಣ ಭಾಷೆಗೆ ಆದ್ಯತೆ ಅಗತ್ಯ : ಡಾ. ಮೋಹನ್ ಚಂದ್ರಗುತ್ತಿ

Malenadu Mirror Desk

ಬಿಜೆಪಿ- ಜೆಡಿಎಸ್ ನಡುವೆಯೇ ಪೈಪೋಟಿ, ಅನುಕಂಪದ ಮುಂದೆ ಆರ್ಥಿಕ ಬಲದ ಸವಾರಿ 

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.