ಶಾಲೆಯಿಂದ ಹೊರಗುಳಿದಿರುವ ಮಕ್ಕಳ ಸಮೀಕ್ಷೆ ನಡೆಸಲು ನಮ್ಮಿಂದ ಆಗುವುದಿಲ್ಲ ಎಂದು ಅಂಗನವಾಡಿ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಶಿವಮೊಗ್ಗದಲ್ಲಿ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು.
ಸರಕಾರ ಶಾಲೆಯಿಂದ ಹೊರಗುಳಿದ ಮಕ್ಕಳ ಸರ್ವೆ ಮಾಡಲು ಆದೇಶ ಹೊರಡಿಸಿರುವುದು ಅವೈಜ್ಞಾನಿಕವಾಗಿದೆ. ಅಂಗನವಾಡಿ ಕಾರ್ಯಕರ್ತೆಯರಿಗೆ ಈಗಾಗಲೇ ಹತ್ತು ಹಲವು ಕೆಲಸಗಳನ್ನು ನಿಯೋಜಿಸಲಾಗಿದೆ. ಹೀಗಿರುವಾಗ ಮತ್ತೆ ಹೆಚ್ಚುವರಿ ಹೊರೆ ಬೇಡ. ಈ ಸಂಬಂಧ ನ್ಯಾಯ ಕೋರಿ ಕೋರ್ಟ್‌ಗೆ ಮನವಿ ಸಲ್ಲಿಸಲಾಗಿದೆ. ಅದು ಇತ್ಯರ್ಥವಾಗುವ ತನಕ ಸಮೀಕ್ಷೆ ಹೋಗದಂತೆ ತಡೆಯಬೇಕು ಎಂದು ಮನವಿ ಸಲ್ಲಿಸಲಾಯಿತು.
previous post
next post