ಶಿಕಾರಿಪುರ ತಾಲೂಕಿನ ಚಿಕ್ಕಮಾಗಡಿ ತಾಂಡಾದ ಜವಳೆಕಟ್ಟೆ ಕೆರೆ ಮತ್ತು ಕೆರೆಕಟ್ಟೆ ಗ್ರಾಮದ ಕೆರೆದಡದಲ್ಲಿ ಕಳ್ಳಭಟ್ಟಿ ಸಾರಾಯಿ ಮಾಡುತ್ತಿರುವುದನ್ನು ಪತ್ತೆ ಹಚ್ಚಿದ ಅಬಕಾರಿ ಅಧಿಕಾರಿಗಳು 315 ಲೀಟರ್ ಕೊಳೆಯನ್ನು ನಾಶಪಡಿಸಿದ್ದಾರೆ.
ಈ ಸಂದರ್ಭದಲ್ಲಿ ಅಲ್ಲಿದ್ದ ಆರೋಪಿಗಳೆಲ್ಲಾ ಪರಾರಿಯಾಗಿದ್ದಾರೆ. ಅಬಕಾರಿ ನಿರೀಕ್ಷಕ ಹನುಮಂತಪ್ಪ ಅವರ ನೇತೃತ್ವದಲ್ಲಿ ದಾಳಿ ನಡೆದಿದ್ದು, ಪ್ರಕರಣ ದಾಖಲಾಗಿದೆ.
ಘಟನೆಯ ಹಿನ್ನೆಲೆಯಲ್ಲಿ ಚಿಕ್ಕಮಾಗಡಿ ತಾಂಡಾದಲ್ಲಿ ಅಬಕಾರಿ ಉಪ ಆಯುಕ್ತ ಕ್ಯಾಪ್ಟನ್ ಅಜಿತ್‌ಕುಮಾರ್ ನೇತ್ವತ್ವದಲ್ಲಿ ಕಳ್ಳಭಟ್ಟಿ ಸೇವನೆಯಿಂದಾಗುವ ದುಷ್ಪರಿಣಾಮದ ಕುರಿತು ಜಾಗೃತಿ ಮೂಡಿಸಲಾಯಿತು. ಕಳ್ಳಭಟ್ಟಿ ತಯಾರಕರ ಬಗ್ಗೆ ಇಲಾಖೆಗೆ ಮಾಹಿತಿ ನೀಡುವಂತೆ ಈ ಸಂದರ್ಭದಲ್ಲಿ ಮನವಿ ಮಾಡಲಾಯಿತು.
previous post
next post