ಪೋಷಕರು ಸರ್ಕಾರಿ ಶಾಲೆಗಳ ಬಗ್ಗೆ ತಾತ್ಸಾರ ತೋರದೆ, ಉತ್ತಮ ಶೈಕ್ಷಣಿಕ ಸೌಲಭ್ಯ ಒಳಗೊಂಡು ಶ್ರಿಮಂತವಾಗಿರುವ ಶಾಲೆಗಳಿಗೆ ಯಾವುದೇ ಆತಂಕವಿಲ್ಲದೆ ತಮ್ಮ ಮಕ್ಕಳನ್ನು ದಾಖಲಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಮನವಿ ಮಾಡಿದರು.
ನಗರದ ಕೆ.ಆರ್.ಪುರಂ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿದ ಅವರು, ಶಾಲೆಯನ್ನು ಹೈದ್ರಾಬಾದ್‌ನ ಕೆ.ಎಂ.ವಿ. ಸಂಸ್ಥೆಯ ಮುಖ್ಯಸ್ಥ ಹರ್ಷ ಅವರು ೫೦ಲಕ್ಷ ರೂ.ಗಳ ವೆಚ್ಚದಲ್ಲಿ ಅಭಿ ವೃದ್ಧಿಪಡಿಸಲು ಆಸಕ್ತಿ ತೋರಿದ್ದಾರೆ ಎಂದರು.
ಅವರು ನೀಡುವ ನಿಧಿಯಿಂದ ಶಾಲಾ ಅಗತ್ಯತೆಗಳನ್ನು ಮುಂದಿನ ೨ ತಿಂಗಳ ಅವಧಿಯೊಳಗಾಗಿ ಒದಗಿಸಲು, ಕಾಮಗಾರಿಗಳನ್ನು ಪೂರೈಸುವಂತೆ ಗುತ್ತಿಗೆದಾರರಿಗೆ ಸೂಚಿಸಿ ದರಲ್ಲದೆ ಪೋಷಕರ, ಶಿಕ್ಷಕರ ನಿರೀಕ್ಷೆಯಂತೆ ಶಾಲೆಗಳನ್ನು ಅಭಿವೃದ್ಧಿಪಡಿಸಲು ಸರ್ಕಾರ ಬದ್ಧವಾಗಿದೆ ಎಂದರು.
ನಗರದ ಸರ್ಕಾರಿ ಶಾಲೆಗಳು ಯಾವುದೇ ಖಾಸಗಿ ಶಾಲೆಗಳಿಗೆ ಕಡಿಮೆ ಇಲ್ಲದಂತೆ ಅಭಿವೃದ್ಧಿಪಡಿಸಿ, ವಿದ್ಯಾರ್ಥಿಗಳ ನಿರೀಕ್ಷೆಯಂತೆ ಮೂಲಭೂತ ಅಗತ್ಯತೆಗಳನ್ನು ಒದಗಿಸಿ, ಉತ್ತಮ ಶೈಕ್ಷಣಿಕ ವಾತಾವರಣ ನಿರ್ಮಿಸಲು ಉದ್ದೇಶಿಸಲಾಗಿದೆ. ಅಭಿವೃ ದ್ಧಿಗೆ ದಾನಿಗಳಿಂದ ಆರ್ಥಿಕ ನೆರವು ಪಡೆದು, ಶಾಲಾ ಕೊಠಡಿ, ಸಭಾಂಗಣ, ಕಾಂಪೌಂಡ್, ಗ್ರಂಥಾಲಯ, ಶೌಚಾಲಯ, ಕ್ರೀಡಾಂಗಣ, ಕೊಠಡಿ ಸೇರಿದಂತೆ ಎಲ್ಲಾ ರೀತಿಯಲ್ಲಿ ಅಭಿವೃದ್ಧಿಪಡಿಸಲಾಗುವುದು ಎಂದರು.
ಸಂಸ್ಥೆಯು ಈ ಶಾಲಾ ಕಟ್ಟಡದ ಅಭಿವೃಧ್ಧಿ ಚಟುವಟಿಕೆಗಳಿಗಾಗಿ ರೂ.೫೦ ಲಕ್ಷಗಳನ್ನು ನೀಡಲು ಉದ್ದೇಶಿಸಿದ್ದು, ಅದರ ಮೊದಲ ಕಂತಿನ ಹಣ ರೂ.೨೫ ಲಕ್ಷಗಳ ಚೆಕ್ಕನ್ನು ಸಂಸ್ಥೆಯ ಮುಖ್ಯಸ್ಥ ಜಯಪ್ರಕಾಶ್ ಅವರು ಸಚಿವರಿಗೆ ಹಸ್ತಾಂತರಿಸಿದರು. ಕೈಗೊಳ್ಳುವ ಎಲ್ಲಾ ಕಾಮಗಾರಿಗಳು ಗುಣಮಟ್ಟದ್ದಾಗಿರುವಂತೆ ನೋಡಿಕೊಳ್ಳು ವಲ್ಲಿ ಸ್ಥಳೀಯ ಸಂಸ್ಥೆಗಳ ಚುನಾಯಿತ ಪ್ರತಿನಿಧಿಗಳು, ಶಾಲಾ ಮೇಲುಸ್ತುವಾರಿ ಸಮಿತಿಯ ಪದಾಧಿಕಾರಿಗಳು ಗಮನಹರಿ ಸುವಂತೆ ಸೂಚಿಸಿದರು.
ಈ ಸಂದರ್ಭದಲ್ಲಿ ಸಚಿವರಿಗೆ ಶಾಲೆಗೆ ಆಗಬೇಕಾದ ವಿವಿಧ ಕೆಲಸಗಳ ಬೇಡಿಕೆಯ ಪಟ್ಟಿಯನ್ನು ಸಲ್ಲಿಸಲಾಯಿತು. ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎನ್.ಎಂ.ರಮೇಶ್, ಸುನಿತಾ ಅಣ್ಣಪ್ಪ, ಮುಖ್ಯ ಶಿಕ್ಷಕ ರಾಮಾಚಾರ್, ಶಿಕ್ಷಕಿ ಯರಾದ ಲತಾ, ರೂಪಾ, ಸುಮಾ, ಕೀರ್ಥನಾ ಸೇರಿದಂತೆ ಶಾಲೆಯ ಮೇಲು ಸ್ತುವಾರಿ ಸಮಿತಿಗಳ ಅಧ್ಯಕ್ಷರು, ಪದಾಧಿಕಾರಿಗಳು, ಅಧಿಕಾರಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದರು.
ಆನಂತರ ಸಚಿವರು ನಗರದ ಸೀಗೆಹಟ್ಟಿ, ಕೆ.ಆರ್.ಪುರಂ ಮತ್ತು ಬಿ.ಬಿ.ಸ್ಟ್ರೀಟ್‌ನ ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ ಭೇಟಿ ನೀಡಿದರು.
previous post