ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಜನ್ಮದಿನದ ಅಂಗವಾಗಿ ಶಿವಮೊಗ್ಗದಲ್ಲಿ ಆಯೋಜಿಸಿರುವ ನಾಗರೀಕ ಸನ್ಮಾನಕ್ಕೆ ವಿವಿಧ ಸಂಘಟನೆಗಳು ಕೈಜೋಡಿಸಲಿವೆ.
ರಾಜ್ಯ ಸರಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಅವರು ಗುರುವಾರ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿ, ಮುಖ್ಯಮಂತ್ರಿ ಯಡಿಯೂರಪ್ಪ ಅವರು ಶಿವಮೊಗ್ಗ ಜಿಲ್ಲೆಯ ಎಲ್ಲ ಕ್ಷೇತ್ರಗಳಿಗೂ ಅನುದಾನ ನೀಡಿದ್ದಾರೆ. ಅಭಿವೃದ್ಧಿಯ ಹರಿಕಾರ ಮುಖ್ಯಮಂತ್ರಿಗೆ ಜಿಲ್ಲೆಯಲ್ಲಿ ನಡೆಯುತ್ತಿರುವ ನಾಗರಿಕ ಸನ್ಮಾನದಲ್ಲಿ ಭಾಗಿಯಾಗುವುದು ನಮ್ಮ ಕರ್ತವ್ಯ ಹಾಗಾಗಿ ಅಭಿನಂದನಾ ಸಮಿತಿಯೊಂದಿಗೆ ನೌಕರರ ಸಂಘವು ಭಾಗಿಯಾಗಲಿದೆ ಎಂದು ಹೇಳಿದರು.
ಶಿವಮೊಗ್ಗ ಪ್ರೆಸ್ ಟ್ರಸ್ಟ್ ಅಧ್ಯಕ್ಷ ಎನ್.ಮಂಜುನಾಥ್, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಿ.ಬಿ.ಶಂಕರಪ್ಪ, ಕೈಗಾರಿಕಾ ಮತ್ತು ವಾಣಿಜ್ಯ ಸಂಘದ ಅಧ್ಯಕ್ಷ ವಾಸುದೇವ್, ಖಾಸಗಿ ಬಸ್ ಮಾಲೀಕರ ಸಂಘದ ಅಧ್ಯಕ್ಷ ರಂಗಪ್ಪ, ಮಾಚೇನಹಳ್ಳಿ ಕೈಗಾರಿಕಾ ಸಂಘದ ರಮೇಶ್ ಹೆಗಡೆ ತಮ್ಮ ಸಂಘಟನೆಗಳು ಸನ್ಮಾನ ಕಾರ್ಯಕ್ರಮಕ್ಕೆಸಾಥ್ ನೀಡಲಿವೆ ಎಂದು ಹೇಳಿದರು.
previous post
next post