ರಾಜ್ಯದಲ್ಲಿ ಪ್ರಗತಿಯಲ್ಲಿರುವ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಲು ಈ ಬಾರಿಯ ಬಜೆಟ್‌ನಲ್ಲಿ ಆದ್ಯತೆ ನೀಡಲಾಗುವುದು. ಮಾತ್ರವಲ್ಲದೆ ಮಹಿಳೆಯರ ಅಭ್ಯುದಯಕ್ಕೆ ಹೆಚ್ಚಿನ ಒತ್ತು ನೀಡಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದರು.
ಸೊರಬ ತಾಲೂಕಿನಲ್ಲಿ ೧೦೫ ಕೋಟಿ ರೂ.ವೆಚ್ಚದಲ್ಲಿ ನಿರ್ಮಾಣ ಮಾಡಿರುವ ಮೂಗೂರು ಏತಾ ನೀರಾವರಿ ಯೋಜನೆ ಲೋಕಾರ್ಪಣೆಗೊಳಿಸಿ ಆನವಟ್ಟಿಯಲ್ಲಿ ಅವರು ಮಾತನಾಡಿದರು. ಜಿಲ್ಲೆಯ ಅಭಿವೃದ್ಧಿಗೆ ಪೂರಕವಾದ ಹಲವು ಯೋಜನೆಗಳ ಅನುಷ್ಟಾನಕ್ಕೆ ಬದ್ಧನಾಗಿದ್ದೇನೆ. ಸರಕಾರ ಸವಾಲುಗಳನ್ನು ಅವಕಾಶವಾಗಿ ಪರಿವರ್ತಿಸಿ ಅಭಿವೃದ್ಧಿ ಪಥದತ್ತ ದೃಢ ಹೆಜ್ಜೆ ಇಡಲಾಗುತ್ತಿದೆ. ಈ ಯೋಜನೆಯಲ್ಲಿ ವರದಾ ನದಿಯಿಂದ ನೀರೆತ್ತಿ ೩೧ ಕೆರೆಗಳನ್ನು ತುಂಬಿಸಲಾಗುತ್ತಿದೆ. ೯ ಕೋಟಿ ರೂ. ವೆಚ್ಚದಲ್ಲಿ ಗ್ರಾಮೀಣ ಭಾಗದ ೧೫ ರಸ್ತೆ ಕಾಮಗಾರಿಗಳನ್ನು ಪೂರ್ಣಗೊಳಿಸಲಾಗಿದೆ.ಉಳವಿ ಗ್ರಾಮದಲ್ಲಿ ನೂತನ ರೈತ ಸಂಪರ್ಕ ಕೇಂದ್ರ, ಗುಡವಿ ಗ್ರಾಮದಲ್ಲಿ ಆಯುರ್ವೇದ ಆಸ್ಪತ್ರೆ, ಭಾರಂಗಿ ಗ್ರಾಮದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಇಂದು ಲೋಕಾರ್ಪಣೆ ಮಾಡಲಾಗಿದೆ ಎಂದು ಯಡಿಯೂರಪ್ಪ ಅವರು ಹೇಳಿದರು.
ಸಂಸದರಾದ ಬಿ.ವೈರಾಘವೇಂದ್ರ, ನಗರಾಭಿವೃದ್ಧಿ ಸಚಿವ ಬಸವರಾಜು, ಶಾಸಕ ಕುಮಾರ ಬಂಗಾರಪ್ಪ, ವಿಧಾನ ಪರಿಷತ್ ಸದಸ್ಯೆ ಭಾರತಿ ಶೆಟ್ಟಿ, ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.
previous post