Malenadu Mitra
ರಾಜ್ಯ ಶಿವಮೊಗ್ಗ

ಸ್ಮಾರ್ಟ್ ಸಿಟಿಯಲ್ಲಿ 45 ಎಕ್ರೆ ಪ್ರದೇಶ ಹಸಿರೀಕರಣ

ಸ್ಮಾರ್ಟ್ ಸಿಟಿ ಯೋಜನೆಯಡಿ ಶಿವಮೊಗ್ಗ ನಗರದಲ್ಲಿ ಒಟ್ಟು 15ಸ್ಥಳಗಳಲ್ಲಿ 45ಎಕ್ರೆ ಪ್ರದೇಶವನ್ನು ಹಸಿರೀಕರಣಗೊಳಿಸಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದರು.

ಅವರು ಭಾನುವಾರ ನಗರದ ಕೀರ್ತಿ ನಗರದ ಉದ್ಯಾನದಲ್ಲಿ ಸಸಿಗಳನ್ನು ನೆಡುವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಆರು ತಿಂಗಳ ಅವಧಿಯಲ್ಲಿ 8630 ಸಸಿಗಳನ್ನು ನೆಡುವ ಕಾರ್ಯಕ್ರಮ ಇದಾಗಿದೆ. ಇದಕ್ಕೆ 2.46ಕೋಟಿ ರೂ. ವೆಚ್ಚವಾಗಲಿದ್ದು, ಸ್ಥಳೀಯ 50 ಬಗೆಯ ಸಸ್ಯ ಪ್ರಭೇದಗಳನ್ನು ಆಯ್ಕೆ ಮಾಡಲಾಗಿದೆ. ಇದರಲ್ಲಿ 15ವಿವಿಧ ಜಾತಿಯ ಹಣ್ಣು ಬಿಡುವ ಮರಗಳು, 13 ವಿವಿಧ ಹೂ ಬಿಡುವ ಸಸಿಗಳು, 8ವಿವಿಧ ಜಾತಿಯ ಫಿಕಸ್ ಸಸಿಗಳನ್ನು ಬೆಳೆಸಲಾಗುತ್ತಿದೆ. ಗುತ್ತಿಗೆದಾರರು ಮೂರು ವರ್ಷಗಳ ನಿರ್ವಹಣೆಯನ್ನು ಸಮರ್ಪಕವಾಗಿ ಕೈಗೊಳ್ಳುವ ಶರತ್ತನ್ನು ವಿಧಿಸಲಾಗಿದೆ. ಸಾರ್ವಜನಿಕರ ಸಹಯೋಗದಲ್ಲಿ ಶಿವಮೊಗ್ಗ ನಗರವನ್ನು ಹಸಿರೀಕರಣಗೊಳಿಸುವ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು, ಪ್ರತಿಯೊಬ್ಬರೂ ಸಹಕಾರ ನೀಡಬೇಕು ಎಂದು ಅವರು ಈ ಸಂದರ್ಭದಲ್ಲಿ ಮನವಿ ಮಾಡಿದರು.

ಶಿವಮೊಗ್ಗ ನಗರದಲ್ಲಿ ಶುದ್ಧ ಗಾಳಿ, ಉತ್ತಮ ವಾತಾವರಣ ನಿರ್ಮಿಸಲು ಸ್ಮಾರ್ಟ್ ಸಿಟಿ ಯೋಜನೆಯಡಿ ಹಸಿರೀಕರಣ ಯೋಜನೆ ಕೈಗೆತ್ತಿಕೊಳ್ಳಲಾಗಿದ್ದು, ಈಗಾಗಲೇ ಹಲವು ಭಾಗಗಳಲ್ಲಿ ಸಸಿ ನೆಡುವ ಕಾರ್ಯ ಪೂರ್ಣಗೊಂಡಿದೆ. ಸ್ಮಾರ್ಟ್ ಸಿಟಿ ಯೋಜನೆಯ ಪರಿಕಲ್ಪನೆಗೆ ಪೂರಕವಾಗಿ ಹಸಿರೀಕರಣ ಕಾರ್ಯ ಕೈಗೊಳ್ಳಲಾಗಿದೆ. ಜನರಿಗೆ ವಾಸಯೋಗ್ಯ ಪರಿಸರ, ವಿಪುಲ ಆರ್ಥಿಕ ಅವಕಾಶ ಕಲ್ಪಿಸುವ ಸುಧಾರಿತ ಗುಣಮಟ್ಟದ ನಗರ ಆಡಳಿತ ವ್ಯವಸ್ಥೆ ರೂಪಿಸುವುದು ಯೋಜನೆ ಉದ್ದೇಶ. ಈ ನಿಟ್ಟಿನಲ್ಲಿ ಹಲವಾರು ಯೋಜನೆಗಳನ್ನು ಜಾರಿಗೊಳಿಸಲಾಗುತ್ತಿದೆ ಎಂದರು.

ಚಿದಾನಂದ ವಟಾರೆ, ಪಾಲಿಕೆ ಸದಸ್ಯರಾದ ಚನ್ನಬಸಪ್ಪ, ಆರತಿ ಹಾಮಾಪ್ರಕಾಶ್, ನಾಗರಾಜ ಕಂಕಾರಿ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.

Ad Widget

Related posts

ಹಕ್ಕುಪತ್ರಕ್ಕಾಗಿ ಅರಣ್ಯವಾಸಿಗಳ ಅರಣ್ಯರೋದನ

Malenadu Mirror Desk

ದೀಪಾವಳಿಯ ವಿಶೇಷ : ಮುಸ್ಲಿಂ ಯುವಕನಿಂದ ಲಕ್ಷ್ಮೀ ಪೂಜೆ

Malenadu Mirror Desk

ಕಲ್ಲುಕ್ವಾರಿಗಳಿಗೆ ಅನುಮತಿ: ಪುನರ್ ಪರಿಶೀಲನೆ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.