ಸರಕಾರ ಹಲವು ಯೋಜನೆಗಳನ್ನು ಅನುಷ್ಟಾನಗೊಳಿಸುವುದರೊಂದಿಗೆ ಶೈಕ್ಷಣಿಕ ಪ್ರಗತಿಗೆ ಹೆಚ್ಚು ಒತ್ತು ನೀಡಿದೆ ಎಂದು ಶಾಸಕ ಹಾಗೂ ಗೃಹಮಂಡಳಿ ಅಧ್ಯಕ್ಷ ಅರಗ ಜ್ಞಾನೇಂದ್ರ ಹೇಳಿದರು.
ರಿಪ್ಪನ್ ಪೇಟೆ ಸಮೀಪದ ಹುಂಚಾ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹಡ್ಲುಬೈಲು ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಪಾಠಶಾಲೆಯ ನೂತನ ಕೊಠಡಿಯನ್ನು ಉದ್ಘಾಟಿಸಿ ಮಾತನಾಡಿ ಶಾಲೆಯ ಕಟ್ಟಡ ಶಿಥಿಲವಾಗಿದ್ದು ಕಳೆದ ವರ್ಷದ ಮಳೆಗಾಲದಲ್ಲಿ ಕಟ್ಟಡ ಬಿದ್ದು ಹೋಗಿತ್ತು. ತಕ್ಷಣ ಸರ್ಕಾರದಿಂದ 10 ಲಕ್ಷ ರೂ ಹಣವನ್ನು ಬಿ ಗ್ರಾಮಾಂತರ ಪ್ರದೇಶದಲ್ಲಿನ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ಎಂಬ ಉದ್ದೇಶದಿಂದ ಸರ್ಕಾರ ಬಿಡುಗಡೆಮಾಡುವ ಮೂಲಕ ಸುಸಜ್ಜಿತ ಕಟ್ಟಡವನ್ನು ನಿರ್ಮಿಸಿರುವುದನ್ನು ನೋಡಿ ಗುತ್ತಿಗೆದಾರರನ್ನು ಶಾಸಕರು ಪ್ರಶಂಸಿಸಿದರು.
`
`ಅರಣ್ಯಾಧಿಕಾರಿಗಳ ವಿರುದ್ದ ಶಾಸಕ ಗರಂ
ಸೊಪ್ಪಿನಬೆಟ್ಟ ಕಾನುಕಾಡು ಗೋಮಾಳ ಜಾಗದಲ್ಲಿ ವಾಸಿಸುವರಿಗೆ ಶಾಸನ ಸಭೆಯಲ್ಲಿ ತಿದ್ದುಪಡಿ ತರುವುದರೊಂದಿಗೆ ಅವರಿಗೆ ಪಟ್ಟಾಕೊಡಿಸುವುದರ ಬಗ್ಗೆ ಹೋರಾಟ ನಡೆಸಲಾಗುತ್ತಿದೆ. ಈ ಪ್ರದೇಶಗಳಲ್ಲಿ ವಾಸಿಸುವವರಿಗೆ ತೊಂದರೆ ಕೊಡಬಾರದು. ಅದೇ ರೀತಿ ಹೊಸದಾಗಿ ಒತ್ತುವರಿ ಮಾಡುವವರ ವಿರುದ್ಧ ಅರಣ್ಯ ಇಲಾಖೆ ಕಠಿಣ ಕ್ರಮ ಕೈಗೊಳ್ಳಬೇಕೆಂದರು. ಗ್ರಾಮೀಣ ಸಂಪರ್ಕಕ್ಕೆ ಮೂಲಭೂತ ಸೌಕರ್ಯ ಕಲ್ಪಿಸಲು ಅರಣ್ಯ ಇಲಾಖೆ ಅಡ್ಡಿ ಮಾಡಿದರೆ ನಾನು ಸುಮ್ಮನಿರುವುದಿಲ್ಲ ಎಂದು ಆರಗ ಜ್ಞಾನೇಂದ್ರ ಹೇಳಿದರು.
ಶಾಲೆಯ ಶಿಕ್ಷಕ ಚಂದ್ರಶೇಖರ ಅವರನ್ನು ಶಾಸಕರು ಸನ್ಮಾನಿಸಿ ಗೌರವಿಸಿದರು.ಎಸ್.ಡಿ.ಎಂ.ಸಿ.ಅಧ್ಯಕ್ಷ ರೇವಪ್ಪ ಅಧ್ಯಕ್ಷತೆ ವಹಿಸಿದ್ದರು.
ಮುಖ್ಯತಿಥಿಗಳಾಗಿ ಜಿಲ್ಲಾ ಪಂಚಾಯ್ತಿ ಸದಸ್ಯರಾದ ಸುರೇಶ್ ಸ್ವಾಮಿರಾವ್,ಕುಮಾರಿ ಶ್ವೇತಾ ಅರ್.ಬಂಡಿ,ತಾಲ್ಲೂಕ್ ಪಂಚಾಯ್ತಿ ಅಧ್ಯಕ್ಷ ವೀರೇಶ್ ಅಲುವಳ್ಳಿ,ಹುಂಚಾ ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಪಲ್ಲವಿ, ಉಪಾಧ್ಯಕ್ಷ ದೇವೇಂದ್ರಪ್ಪ,ಗ್ರಾ.ಪಂ.ಸದಸ್ಯರಾದ ರಾಘವೇಂದ್ರ,ಶ್ರೀಧರ,ರಾಜಶೇಖರ,ಸರೋಜ ಮತ್ತಿತರರಿದ್ದರು.