ಶಿಕಾರಿಪುರ ಆಶ್ರಯ ಬಡಾವಣೆ ರಸ್ತೆಯ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ದಾಳಿ ನಡೆಸಿ 4 ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರು ಶಿಕಾರಿಪುರ ಟೌನ್ ಮೂಲದ ಸುನಿಲ್ (26) ಇಮ್ರಾನ್ (22) ದಾದಾಪೀರ್ (22) ರಿಜ್ವನ್ (23) ಆರೋಪಿಗಳಿಂದ 400 ಗ್ರಾಂ ತೂಕದ ಗಾಂಜಾ ಹಾಗೂ ಗಾಂಜಾ ಮಾರಾಟ ಮಾಡಿ ಗಳಿಸಿದ 650 ರೂಪಾಯಿ ಹಣವನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಗಳ ವಿರುದ್ಧ NDPS ಕಾಯ್ದೆ ರೀತ್ಯ ಪ್ರಕರಣವನ್ನು ದಾಖಲಿಸಿ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.
ಮಾದಕ ವಸ್ತು ಗಾಂಜಾ ಮಾರಾಟದ ಬಗ್ಗೆ ಸಾರ್ವಜನಿಕರು ಶಿವಮೊಗ್ಗ ಜಿಲ್ಲಾ ಪೊಲೀಸ್ ದೂರವಾಣಿ ಸಂಖ್ಯೆ 9480803301 ಗೆ ಕರೆ ಮಾಡಿ ಮಾಹಿತಿಯನ್ನು ನೀಡಬಹುದು. ಮಾಹಿತಿಯನ್ನು ನೀಡಿದವರ ವಿವರವನ್ನು ಗೌಪ್ಯವಾಗಿಡಲಾಗುವುದು ಎಂದು ಪೊಲೀಸ್ ಅಧೀಕ್ಷಕ ಕೆ.ಎಂ ಶಾಂತರಾಜು ತಿಳಿಸಿರುತ್ತಾರೆ.
previous post