ಮಾಜಿ ಸಚಿವ ಎಚ್.ಎಂ.ರೇವಣ್ಣ ಅಭಿನಂದನೆ ಮತ್ತು ಗ್ರಂಥಗಳ ಬಿಡುಗಡೆ ಸಮಾರಂಭ ಭಾನುವಾರ ಬೆಂಗಳೂರಿನಲ್ಲಿ ಅದ್ದೂರಿಯಾಗಿ ನಡೆಯಿತು ಎಚ್.ಎಂ.ರೇವಣ್ಣ ಸಾಂಸ್ಕೃತಿಕ ಪ್ರತಿಷ್ಠಾನದಿಂದ ಬೆಂಗಳೂರಿನ ಪೂರ್ಣಿಮಾ ಪ್ಯಾಲೇಸ್ ಕನ್ವೆನ್ಷನ್ ಸೆಂಟರ್‍ನಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯದ ಘಟಾನುಘಟಿ ನಾಯಕರು ಹಾಗೂ ರೇವಣ್ಣ ಒಡನಾಡಿಗಳು ಬಂದು ಶುಭ ಹಾರೈಸಿದರು. ಮಾಜಿ ಮುಖ್ಯಮಂತ್ರಿ ಹಾಗೂ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ , ಮಾಜಿ ಸಿಎಂ ವೀರಪ್ಪಮೊಯಿಲಿ, ವಿಧಾನ ಸಭಾಪರಿ ಬಸವರಾಜ ಹೊರಟ್ಟಿ, ರಾಮಲಿಂಗಾರೆಡ್ಡಿ , ಸಲೀಂ ಅಹಮದ್ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಿದ್ದರು.
ಕವಿ ಸಿದ್ದಲಿಂಗಯ್ಯ ಅಭಿನಂದನಾ ಭಾಷಣ ಮಾಡಿದರು. ಗ್ರಂಥಗಳ ಸಂಪಾದಕ ಸಾಹಿತಿ ಲಕ್ಷ್ಮಣ್ ಕೊಡಸೆ ಮಾತನಾಡಿದರು. ಬಿ.ಕೆ.ರವಿ ಸ್ವಾಗತಿಸಿದರು. ವಿದ್ಯಾರ್ಥಿ ದೆಸೆಯಿಂದಲೇ ಹೋರಾಟ ರೂಡಿಸಿಕೊಂಡಿದ್ದ ಎಚ್.ಎಂ.ರೇವಣ್ಣ ಸಾಮಾಜಿಕ ನ್ಯಾಯದ ಪರವಾದ ರಾಜಕಾರಣಿ, ಕುರುಬ ಸಮಾಜಕ್ಕೆ ಅವರ ಕೊಡುಗೆ ಅಪಾರ ಎಂದು ರಾಜಕೀಯ ಗಣ್ಯರು ರೇವಣ್ಣ ಅವರ ರಾಜಕೀಯ ಹಾದಿಯನ್ನು ಸ್ಮರಿಸಿದರು.
previous post