Malenadu Mitra
ರಾಜ್ಯ ಶಿವಮೊಗ್ಗ

ಲೀಗಲ್ ಮೈನಿಂಗ್ ಒಕೆ, ನಿಯಮಾವಳಿ ಖಡ್ಡಾಯ :ಡಿ ಸಿ

ಶಿವಮೊಗ್ಗ ಜಿಲ್ಲೆಯಲ್ಲಿ ಕಲ್ಲು ಗಣಿಗಾರಿಕೆ ಚಟುವಟಿಕೆಗಳನ್ನು ಸ್ಗಗಿತಗೊಳಿಸಿಲ್ಲ. ನಿಯಮಾವಳಿ ಪ್ರಕಾರ ಪರವಾನಿಗೆ ಪಡೆದು ಗಣಿಗಾರಿಕೆ ಮತ್ತು ಖನಿಜ ಸಾಗಾಟಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ತಿಳಿಸಿದರು.

ಅವರು ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ಕ್ವಾರಿ, ಕ್ರಷರ್ ಮತ್ತು ಮರಳುಸಾಗಾಣಿಕಾ ಜಿಲ್ಲಾ ಸಮಿತಿ ಸಭೆಯಲ್ಲಿ ಈ ಕುರಿತು ಪರಿಶೀಲನೆ ನಡೆಸಿದರು.

ಜಿಲ್ಲೆಯಲ್ಲಿ ಪರವಾನಿಗೆ ಹೊಂದಿರುವ ಕ್ವಾರಿಗಳ ಸಮಗ್ರ ಸ್ಥಿತಿಗತಿ ಪರಿಶೀಲನೆಗೆ ಹಾಗೂ ಅಕ್ರಮ ಗಣಿಗಾರಿಕೆಯನ್ನು ಪರಿಶೀಲಿಸಲು ಡ್ರೋನ್ ಮೂಲಕ ಸಮೀಕ್ಷೆ ಕಾರ್ಯವನ್ನು ಕೈಗೊಳ್ಳಲಾಗುತ್ತಿದೆ. ಪರವಾನಿಗೆ ಪಡೆದವರು ನಿಯಮಾವಳಿ ಉಲ್ಲಂಘಿಸದೆ ಗಣಿಗಾರಿಕೆ ಮತ್ತು ಸಾಗಾಟ ನಡೆಸಬೇಕು. ಇದಕ್ಕೆ ಸಂಬಂಧಿಸಿದ ಎಲ್ಲಾ ಇಲಾಖೆಗಳು ಸಮನ್ವಯದಿಂದ ಗಣಿಗಾರಿಕೆ ಮೇಲೆ ನಿಗಾ ವಹಿಸಬೇಕು. ಸ್ಥಳ ತಪಾಸಣೆ ಸಂದರ್ಭದಲ್ಲಿ ಸಬ್ ಇನ್ಸ್ಪೆಕ್ಟರ್ ಮಟ್ಟದ ಅಧಿಕಾರಿ ಸಹ ಉಪಸ್ಥಿತರಿರಬೇಕು ಎಂದರು.

ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮರಳು ನಿರ್ವಹಣೆ: ಜನರಿಗೆ ಸುಲಭವಾಗಿ ಮರಳು ಸಿಗುವಂತೆ ಖಾತ್ರಿಪಡಿಸಲು ಸರ್ಕಾರ ಹೊಸ ಮರಳು ನೀತಿಯನ್ನು ಜಾರಿಗೊಳಿಸಿದೆ. ಅದರ ಪ್ರಕಾರ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಹಳ್ಳ ತೊರೆಗಳಲ್ಲಿ ಲಭ್ಯವಿರುವ ಮರಳನ್ನು ಗುರುತಿಸಿ ಸ್ಥಳೀಯವಾಗಿ ಅದನ್ನು ವಿಲೇವಾರಿ ಮಾಡಲು ಗ್ರಾಮ ಪಂಚಾಯತ್ಗಳಿಗೆ ಅನುಮತಿ ನೀಡಲಾಗುತ್ತಿದೆ.

ತೀರ್ಥಹಳ್ಳಿ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಈಗಾಗಲೇ 24ಕಡೆಗಳಲ್ಲಿ ಇಂತಹ ಮರಳು ಸಂಗ್ರಹವನ್ನು ಗುರುತಿಸಲಾಗಿದ್ದು, ಕೆಲವೇ ದಿನಗಳಲ್ಲಿ ಈ ಕುರಿತು ಅಧಿಸೂಚನೆ ಹೊರಡಿಸಲಾಗುವುದು. ಜಿಲ್ಲಾ ಸಮಿತಿಯು ನಿಗದಿಪಡಿಸಿದ ಪ್ರಮಾಣದ ಮರಳನ್ನು ದೈಹಿಕ ಶ್ರಮದಿಂದ ಹೊರತೆಗೆದು ಟ್ರಾಕ್ಟರ್, ಚಕ್ಕಡಿಯಂತಹ ಸಣ್ಣ ವಾಹನಗಳ ಮೂಲಕ ಸಾಗಿಸಲು ಮಾತ್ರ ಅವಕಾಶವಿದೆ. ಅಶ್ರಯ ಮನೆ ನಿರ್ಮಾಣ, ಸರ್ಕಾರಿ ಕಾಮಗಾರಿಗಳಿಗೆ ಆದ್ಯತೆ ನೀಡಬೇಕು. ಸ್ಥಳೀಯವಾಗಿ ಮರಳು ನಿರ್ವಹಣೆಗೆ ಗ್ರಾಮ ಪಂಚಾಯತ್ ಪಿಡಿಒ ಮತ್ತು ಗ್ರಾಮ ಪಂಚಾಯತ್ ಅಧ್ಯಕ್ಷರು ನೇರ ಹೊಣೆಯಾಗಿದ್ದು, ಮಾರ್ಗಸೂಚಿಯನ್ನು ಉಲ್ಲಂಘಿಸುವವರ ವಿರುದ್ಧ ತಕ್ಷಣ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು ಎಂದು ಅವರು ಹೇಳಿದರು.

ಜಿಲ್ಲೆಯಲ್ಲಿ ಪ್ರಸ್ತುತ ಈ ರೀತಿಯಲ್ಲಿ 2.56 ಮೆಟ್ರಿಕ್ ಟನ್ ಮರಳು ಲಭ್ಯವಿದೆ. ಬೇರೆ ತಾಲೂಕುಗಳಲ್ಲಿ ಇಂತಹ ಮರಳು ಸಂಗ್ರಹ ಗುರುತಿಸುವ ಕಾರ್ಯವನ್ನು ಆದಷ್ಟು ಬೇಗನೆ ಪೂರ್ಣಗೊಳಿಸುವಂತೆ ಅವರು ಸೂಚಿಸಿದರು.

ಜಿಲ್ಲೆಯಲ್ಲಿ ಪರವಾನಿಗೆ ಹೊಂದಿರುವ ಕ್ವಾರಿಗಳ ಸಮಗ್ರ ಸ್ಥಿತಿಗತಿ ಪರಿಶೀಲನೆಗೆ ಹಾಗೂ ಅಕ್ರಮ ಗಣಿಗಾರಿಕೆಯನ್ನು ಪರಿಶೀಲಿಸಲು ಡ್ರೋನ್ ಮೂಲಕ ಸಮೀಕ್ಷೆ ಕಾರ್ಯವನ್ನು ಕೈಗೊಳ್ಳಲಾಗುತ್ತಿದೆ ಎಂದು ಅವರು ಹೇಳಿದರು.ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಕೆ.ಬಿ.ಶಾಂತರಾಜ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಲ್.ವೈಶಾಲಿ, ಉಪವಿಭಾಗಾಧಿಕಾರಿ ಟಿ.ಬಿ.ಪ್ರಕಾಶ್ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

41 ಲಕ್ಷ ರೂ. ದಂಡ ವಸೂಲಿ

ಪ್ರಸ್ತುತ ವರ್ಷ ಇದುವರೆಗೆ ಜಿಲ್ಲೆಯಲ್ಲಿ ನಾಲ್ಕು ಅಕ್ರಮ ಮರಳು ಸಾಗಾಟ ಮತ್ತು ದಾಸ್ತಾನು ಪ್ರಕರಣಗಳಲ್ಲಿ ಮೊಕದ್ದಮೆ ದಾಖಲಿಸಲಾಗಿದೆ. ಅನಧಿಕೃತ ಮರಳುಗಾರಿಕೆಯ 33 ಪ್ರಕರಣಗಳಲ್ಲಿ 23.26 ಲಕ್ಷ ರೂ. ದಂಡ ವಿಧಿಸಲಾಗಿದೆ. 18 ಅನಧಿಕೃತ ಕಲ್ಲು ಗಣಿಗಾರಿಕೆ ಪ್ರಕರಣಗಳಲ್ಲಿ ಮೊಕದ್ದಮೆ ದಾಖಲಿಸಲಾಗಿದೆ. ಅನಧಿಕೃತ ಕಲ್ಲು ಗಣಿಗಾರಿಕೆ ಹಾಗೂ ಸಾಗಾಟದ 54 ಪ್ರಕರಣಗಳನ್ನು ಪತ್ತೆ ಹಚ್ಚಲಾಗಿದ್ದು, 41 ಲಕ್ಷ ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಗಣಿ ಮತ್ತು ಭೂವಿಜ್ಞಾನ ಇಲಾಖೆ ಹಿರಿಯ ಭೂವಿಜ್ಞಾನಿ ರಾಮ್ಜಿ ಅವರು ತಿಳಿಸಿದರು.

Ad Widget

Related posts

ಪ್ರಧಾನಿ ಕಾರ್ಯಕ್ರಮಕ್ಕೆ 15 ಎಕರೆ ಪ್ರದೇಶದಲ್ಲಿ ತಯಾರಿ ಸಚಿವ -ಸಂಸದರಿಂದ ಸ್ಥಳ ಪರಿಶೀಲನೆ

Malenadu Mirror Desk

ಸೂರ್ಯ ನಮಸ್ಕಾರಕ್ಕೂ ಸ್ವಾತಂತ್ರ್ಯೋತ್ಸವಕ್ಕೂ ಏನು ಸಂಬಂಧ ; ಡಿಎಸ್ ಎಸ್ ಗುರುಮೂರ್ತಿ ಪ್ರಶ್ನೆ

Malenadu Mirror Desk

ಸಂಕಷ್ಟ ಕಾಲದಲ್ಲಿ ಹಂಚಿ ತಿನ್ನುವುದು ಮಾನವೀಯತೆ: ಶಫಿ ಸಾದುದ್ದೀನ್

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.