Malenadu Mitra
ರಾಜ್ಯಶಿವಮೊಗ್ಗ

ಕೋವಿಡ್-19 ಹಿನ್ನೆಲೆ : ಧಾರ್ಮಿಕ ಆಚರಣೆ, ಸಭೆ ಸಮಾರಂಭಗಳಿಗೆ ನಿರ್ಬಂಧ

ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಗುಂಪು ಗುಂಪಾಗಿ ಕೋವಿಡ್ – 19 ಪ್ರಕರಣಗಳು ವರದಿಯಾಗುತ್ತಿದ್ದು, 2ನೇ ಅಲೆಯ ಅಪಾಯವನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಮುಂಬರುವ ಯುಗಾದಿ, ಹೋಳಿ ಹಬ್ಬ, ಷಬ್-ಎ-ಬರಾತ್, ಗುಡ್ ಫ್ರೈಡೆ ಇತ್ಯಾದಿ ಹಬ್ಬಗಳ ಸಂದರ್ಭಗಳಲ್ಲಿ ನಡೆಯಬಹುದಾದ ಸಮಾರಂಭಗಳು, ಆಚರಣೆಗಳು ಹಾಗೂ ಸಾರ್ವಜನಿಕರು ಗುಂಪು ಸೇರಬಹುದಾದ ಇತರ ಚಟುವಟಿಕೆಗಳನ್ನು ನಡೆಸದಂತೆ ಸರ್ಕಾರವು ಆದೇಶಿಸಿದೆ.
ಈ ರೀತಿ ಸಭೆ ಸಮಾರಂಭಗಳು ಆಚರಣೆಗಳಲ್ಲಿ ಗುಂಪು ಗುಂಪಾಗಿ ಸೇರಿದರೆ National Disaster Management Act-2005 ಅಡಿಯಲ್ಲಿ ಅಧಿಕಾರವನ್ನು ಚಲಾಯಿಸಿ ನಿರ್ಬಂದಿಸಿ ಆದೇಶಿಸಿದೆ. ಮೇಲೆ ತಿಳಿಸಿದ ನಿಯಮಗಳನ್ನು ಉಲ್ಲಂಘಿಸಿದಲ್ಲಿ ಅಂತಹ ವ್ಯಕ್ತಿ, ಸಂಘ-ಸಂಸ್ಥೆಗಳ ವಿರುದ್ಧ ವಿಪತ್ತು ನಿರ್ವಾಹಣ ಕಾಯ್ದೆ-2005 ಹಾಗೂ ಐ.ಪಿ.ಸಿ.ಸೆಕ್ಷನ್ 188 ಮತ್ತು ಕರ್ನಾಟಕ ಸಾಂಕ್ರಮಿಕ ರೋಗಗಳ ಕಾಯ್ದೆ 2020 ಭಾಗ (4) (5)&(10) ರೀತ್ಯಾ ಕ್ರಮವನ್ನು ಕೈಗೊಳ್ಳಲು ಅವಕಾಶವಿರುತ್ತದೆ. ಆದುದರಿಂದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಕೋವಿಡ್-19 ರೋಗವನ್ನು ನಿಯಂತ್ರಿಸಲು ಜಿಲ್ಲಾಡಳಿತ ಹಾಗೂ ಮಹಾನಗರಪಾಲಿಕೆಯೊಂದಿಗೆ ಸಹಕರಿಸುವಂತೆ ಶಿವಮೊಗ್ಗ ಮಹಾನಗರಪಾಲಿಕೆ ಆಯುಕ್ತರು ತಿಳಿಸಿರುತ್ತಾರೆ.

Ad Widget

Related posts

ಬ್ರಾಹ್ಮಣ ಮಹಾಸಭಾದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿರುವ ಎಸ್. ರಘುನಾಥ್ ಗೆಲ್ಲಿಸಬೇಕು : ಎಸ್. ದತ್ತಾತ್ರಿ

Malenadu Mirror Desk

ಮದರಸಾಗಳನ್ನು ಬ್ಯಾನ್ ಮಾಡಬೇಕು: ಈಶ್ವರಪ್ಪ

Malenadu Mirror Desk

ಕಾಂಗ್ರೆಸ್‌ನಿಂದ ಮಾತ್ರ ಬಡವರ ಕಲ್ಯಾಣ ಮಾತ್ರ ಸಾಧ್ಯ, ಗ್ಯಾರಂಟಿ ಕಾರ್ಡ್ ವಿತರಣೆ ಮಾಡಿದ ಎಐಸಿಸಿ ಸದಸ್ಯ ಮಧು ಬಂಗಾರಪ್ಪ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.