Malenadu Mitra
ರಾಜಕೀಯರಾಜ್ಯಶಿವಮೊಗ್ಗ

ಸಂಪುಟದಿಂದ ಕೈ ಬಿಡುವ ಎಚ್ಚರಿಕೆ

ತಮ್ಮ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿರುವ ಸಚಿವ ಈಶ್ವರಪ್ಪ ಅವರನ್ನು ಸಂಪುಟದಿಂದಲೇ ಕೈ ಬಿಡುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಗುಡುಗಿದ್ದಾರೆ.
ಬೆಂಗಳೂರಿನ ಖಾಸಗಿ ಹೋಟೆಲ್‍ನಲ್ಲಿ ಬೆಂಬಲಿಗ ಸಚಿವರು ಹಾಗೂ ಸಚಿವರೊಂದಿಗೆ ಬೋಜನ ಕೂಟ ನಡೆಸಿರುವ ಸಿಎಂ ಯಡಿಯೂರಪ್ಪ ಅವರು, ಈಶ್ವರಪ್ಪರ ನಡೆಗೆ ಕೆಂಡಾಮಂಡಲವಾಗಿದ್ದು, ಖಾತೆ ಬದಲಾವಣೆ ಮಾಡುವೆ. ಇನ್ನೂ ಮುಂದುವರಿದರೆ ಸಂಪುಟದಿಂದಲೇ ಕೈಬಿಡುವೆ ಎಂದು ಬೆಂಬಲಿಗರ ಬಳಿ ಹೇಳಿದ್ದಾರೆ ಎನ್ನಲಾಗಿದೆ. ತಮ್ಮ ಖಾತೆಯಲ್ಲಿನ ಹಸ್ತಕ್ಷೇಪದ ಬಗ್ಗೆ ಗಮನ ಸೆಳೆದಿದ್ದೇನೆ. ಹಿರಿಯ ಸಚಿವನಾಗಿ ಇಷ್ಟೂ ಸ್ವತಂತ್ರ ಬೇಡವೇ ಎಂದಿರುವ ಈಶ್ವರಪ್ಪ ಅವರು ಸಿಎಂ ನಡೆಯ ಬಗ್ಗೆ ಆಕ್ರೋಶ ವ್ಯಕ್ತಮಾಡಿದ್ದಾರೆನ್ನಲಾಗಿದೆ.
ಸಭೆಯಲ್ಲಿ ಸಚಿವರಾದ ಬಸವರಾಜ ಬೊಮ್ಮಾಯಿ, ಸಿಸಿ ಪಾಟೀಲ್, ಡಾ.ಕೆ.ಸುಧಾಕರ್, ಆರ್.ಅಶೋಕ್ ಸೇರಿದಂತೆ ಅನೇಕ ಶಾಸಕರೂ ಹಾಜರಿದ್ದರು ಎನ್ನಲಾಗಿದೆ.

Ad Widget

Related posts

ಪ್ರೊ.ಬಿ.ಕೃಷ್ಣಪ್ಪ ಆದರ್ಶವಾದಿಯಾಗಿದ್ದರು: ದಸಂಸ ಸುವರ್ಣ ಸಂಭ್ರಮದಲ್ಲಿ ಆಯನೂರು ಮಂಜುನಾಥ್‌ ಹೇಳಿಕೆ

Malenadu Mirror Desk

ಪೆಸೆಟ್ ಕಾಲೇಜು ಬಳಿ ಬಂದ ಕಾಡಾನೆ !…

Malenadu Mirror Desk

ಸಾರ್ವತ್ರಿಕ ಚುನಾವಣೆ ಮಾದರಿಯಲ್ಲಿ ನೀತಿ ಸಂಹಿತೆ ಕಟ್ಟುನಿಟ್ಟಿನಿಂದ ಜಾರಿ: ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.