ಶಿವಮೊಗ್ಗ ನೂತನ ಜಿಲ್ಲಾ ರಕ್ಷಣಾಧಿಕಾರಿಯಾಗಿ ಬಿ.ಎಂ.ಲಕ್ಷ್ಮೀ ಪ್ರಸಾದ್ ಅವರು ಶುಕ್ರವಾರ ಅಧಿಕಾರ ಸ್ವೀಕರಿಸಿದರು. ನಿನ್ನೆಯಷ್ಟೆ ಸರಕಾರ ಅವರನ್ನು ಮಂಗಳೂರಿನಿಂದ ಶಿವಮೊಗ್ಗಕ್ಕೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿತ್ತು. ನಿರ್ಗಮಿತ ರಕ್ಷಣಾಧಿಕಾರಿ ಕೆ.ಎಂ.ಶಾಂತರಾಜ್ ಅವರು ನೂತನ ಎಸ್‍ಪಿ ಅವರನ್ನು ಬರಮಾಡಿಕೊಂಡರು. ಈ ಸಂದರ್ಭ ಮಾತನಾಡಿದ ಅವರು, ಕೋರಿಕೆ ಮೇಲೆ ಬೆಂಗಳೂರಿಗೆ ವರ್ಗಾವಣೆ ಮಾಡಿದ್ದು, ಶಿವಮೊಗ್ಗ ಎಸ್ಪಿಯಾಗಿ ಮಾಡಿದ ಕೆಲಸ ತೃಪ್ತಿ ತಂದಿದೆ ಎಂದು ಹೇಳಿದರು.
next post