Malenadu Mitra
ರಾಜ್ಯ ಶಿವಮೊಗ್ಗ

ಕೇಂದ್ರ ಸರ್ಕಾರದ ಯೋಜನೆಗಳ ಸೌಲಭ್ಯ ಜನರಿಗೆ ತ್ವರಿತವಾಗಿ ತಲುಪಿಸಬೇಕು

ಆತ್ಮನಿರ್ಭರ ಯೋಜನೆ ಸೇರಿದಂತೆ ಕೇಂದ್ರ ಸರ್ಕಾರದ ಯೋಜನೆಗಳ ಅರ್ಜಿಗಳನ್ನು ತ್ವರಿತಗತಿಯಲ್ಲಿ ವಿಲೇವಾರಿಗೊಳಿಸಿ ಯೋಜನೆಗಳ ಲಾಭ ಜನಸಾಮಾನ್ಯರಿಗೆ ದೊರಕುವಂತೆ ಮಾಡಬೇಕು ಎಂದು ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಅವರು ತಿಳಿಸಿದರು.

ಅವರು ಮಂಗಳವಾರ ಶಿವಮೊಗ್ಗ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಡಿಸಿಸಿ/ಡಿಎಲ್‌ಆರ್‌ಸಿ ಸಭೆಯಲ್ಲಿ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿದರು.

ಬ್ಯಾಂಕುಗಳು ರೈತರು ಸ್ವಾವಲಂಬಿಗಳಾಗುವ ನಿಟ್ಟಿನಲ್ಲಿ ಕೃಷಿ ಕ್ಷೇತ್ರಕ್ಕೆ ಹೆಚ್ಚಿನ ಸಾಲಸೌಲಭ್ಯಗಳನ್ನು ಒದಗಿಸಲು ಮುಂದಾಗಬೇಕು. ಕೇಂದ್ರ ಸರ್ಕಾರದ ವಿಮಾ ಯೋಜನೆಗಳು, ಆವಾಸ್ ಯೋಜನೆ, ನಿರುದ್ಯೋಗಿಗಳಿಗೆ ಸಾಲ ಸೌಲಭ್ಯ ಒದಗಿಸುವ ಮುದ್ರಾ ಯೋಜನೆ ಮೊದಲಾದ ಯೋಜನೆಗಳ ಅನುಷ್ಟಾನಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದರು.

ಬೀದಿ ಬದಿ ವ್ಯಾಪಾರಿಗಳಿಗೆ 10ಸಾವಿರ ರೂ. ಸಹಾಯಧನ ಒದಗಿಸುವ ಪ್ರಧಾನಮಂತ್ರಿ ಆತ್ಮನಿರ್ಭರ ಯೋಜನೆಯಡಿ ಜಿಲ್ಲೆಯಲ್ಲಿ 5692 ಅರ್ಜಿಗಳನ್ನು ಸ್ವೀಕರಿಸಲಾಗಿದ್ದು, ಇದುವರೆಗೆ 3293 ಮಂದಿಗೆ ನೆರವು ಒದಗಿಸಲಾಗಿದೆ. ವಿಲೇವಾರಿಗೆ ಬಾಕಿಯಿರುವ ಎಲ್ಲಾ ಅರ್ಜಿಗಳನ್ನು ಮುಂದಿನ ಮೂರು ತಿಂಗಳ ಒಳಗಾಗಿ ವಿಲೇವಾರಿಗೊಳಿಸಿ ಯೋಜನೆಯ ಲಾಭ ಪ್ರತಿಯೊಬ್ಬರಿಗೂ ಸಿಗುವುದನ್ನು ಖಾತ್ರಿಪಡಿಸಬೇಕು ಎಂದು ಹೇಳಿದರು.

ಪ್ರಧಾನಮಂತ್ರಿ ಆವಾಸ್ ಯೋಜನೆ: ಶಿವಮೊಗ್ಗ ನಗರದ ಗೋವಿಂದಪುರದಲ್ಲಿ 3ಸಾವಿರ ಆಶ್ರಯ ಮನೆಗಳನ್ನು ನಿರ್ಮಿಸಲಾಗುತ್ತಿದ್ದು, ಈಗಾಗಲೇ ಮಾದರಿ ಮನೆಗಳನ್ನು ನಿರ್ಮಿಸಲಾಗಿದೆ. ಈಗಾಗಲೇ 2882ಮಂದಿ ಅರ್ಜಿ ಸಲ್ಲಿಸಿದ್ದು ತಮ್ಮ ಪಾಲಿನ ಮೊತ್ತವನ್ನು ಪಾವತಿಸಿದ್ದಾರೆ. ಇವರಿಗೆ ಮನೆಗಳನ್ನು ನಿರ್ಮಿಸಲು ಬ್ಯಾಂಕುಗಳು ಸಾಲ ನೀಡುವ ಪ್ರಕ್ರಿಯೆಯನ್ನು ಆದಷ್ಟು ಬೇಗನೆ ಪೂರ್ಣಗೊಳಿಸಬೇಕು. ಅಗತ್ಯವಿರುವ ದಾಖಲೆಗಳನ್ನು ಪಡೆದು ಸಾಲ ಸೌಲಭ್ಯ ಒದಗಿಸಿ, 2024ರ ಒಳಗಾಗಿ ಎಲ್ಲರಿಗೂ ಮನೆ ನಿರ್ಮಾಣ ಎಂಬ ಪ್ರಧಾನಮಂತ್ರಿ ಅವರ ಕನಸನ್ನು ನನಸುಗೊಳಿಸಬೇಕು ಎಂದು ಹೇಳಿದರು.

ಜೀವ ವಿಮೆ ಪ್ರಯೋಜನ ಹೆಚ್ಚಿನವರಿಗೆ ಸಿಗಬೇಕು: ಪ್ರಧಾನಮಂತ್ರಿ ಜೀವನ ಜ್ಯೋತಿ ಭಿಮಾ ಯೋಜನೆ ಮತ್ತು ಸುರಕ್ಷಾ ಭಿಮಾ ಯೋಜನೆಯಡಿ ಪ್ರಯೋಜನ ಹೆಚ್ಚಿನ ಜನರಿಗೆ ಸಿಗುವಂತೆ ಕ್ರಮ ಕೈಗೊಳ್ಳಬೇಕು. ಇದುವರೆಗೆ ಜಿಲ್ಲೆಯಲ್ಲಿ ಕೇವಲ 162ಮಂದಿ ಮಾತ್ರ ಡೆತ್ ಕ್ಲೆöÊಮ್ ಮಾಡಿ ತಲಾ ಎರಡು ಲಕ್ಷ ರೂ. ಪಡೆದುಕೊಂಡಿದ್ದಾರೆ. ಮರಣ ಹೊಂದುವವರ ಸಂಖ್ಯೆ ಇದಕ್ಕಿಂತ ಹೆಚ್ಚಾಗಿದ್ದು, ಯೋಜನೆಯ ವ್ಯಾಪ್ತಿಗೆ ಇನ್ನಷ್ಟು ಫಲಾನುಭವಿಗಳನ್ನು ಸೇರಿಸಬೇಕು. ಈ ಕುರಿತು ಗ್ರಾಮೀಣ ಭಾಗಗಳಲ್ಲಿ ಅರಿವು ಮೂಡಿಸಬೇಕು ಎಂದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಲ್.ವೈಶಾಲಿ, ಸೂಡಾ ಅಧ್ಯಕ್ಷ ಜ್ಯೋತಿ ಪ್ರಕಾಶ್, ಲೀಡ್ ಬ್ಯಾಂಕ್ ಮ್ಯಾನೇಜರ್ ಯತೀಶ್, ವಿವಿಧ ಬ್ಯಾಂಕ್‌ಗಳ ಪ್ರತಿನಿಧಿಗಳು, ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.


Ad Widget

Related posts

ಕಾಶೀನಾಥ್ ನಾಯ್ಕ್ ಅವರನ್ನು ಸನ್ಮಾನಿಸಿದ ಕ್ರೀಡಾ ಸಚಿವ

Malenadu Mirror Desk

ಹಿರಿಯರ ತ್ಯಾಗ,ಬಲಿದಾನ ಮರೆಯಬಾರದು : ಧರ್ಮದರ್ಶಿ ಡಾ. ಎಸ್. ರಾಮಪ್ಪ

Malenadu Mirror Desk

ನಕಲಿ ಗೊಬ್ಬರ ಮಾರಾಟದ ವಿರುದ್ಧ ಕ್ರಮ : ಬಿ. ಸಿ ಪಾಟೀಲ್

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.