ರಾಜ್ಯದಾದ್ಯಂತ ಸಾರಿಗೆ ನೌಕರರು ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಮುಷ್ಕರಕ್ಕೆ ಕರೆ ನೀಡಿದ್ದನ್ನು ಬೆಂಬಲಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತಾಲೂಕು ಘಟಕ ತಹಸೀಲ್ದಾರ್ ಶಿವಾನಂದ ಪಿ.ರಾಣೆ ಅವರ ಮೂಲಕ ಮುಖ್ಯಮಂತ್ರಿ ಅವರಿಗೆ ಬುಧವಾರ ಮನವಿ ಸಲ್ಲಿಸಿತು.
ರೈತ ಸಂಘದ ರಾಜ್ಯ ಕಾರ್ಯಾಧ್ಯಕ್ಷ ಮಂಜುನಾಥಗೌಡ ಮಾತನಡಿ, ಸಾರಿಗೆ ನೌಕರರ ಬೇಡಿಕೆ ಈಡೇರಿಸುವವರರೆಗೂ ನಿರಂತರವಾಗಿ ರೈತ ಸಂಘ ಹೋರಾಟ ಮಾಡುತ್ತದೆ. ಸಾರಿಗೆ ನೌಕರರಿಗೆ ಆರನೇ ವೇತನ ಆಯೋಗ ಸಂಪೂರ್ಣವಾಗಿ ಜಾರಿಯಾಗುವ ಜತೆಗೆ ಸರಕಾರಿ ನೌಕರರೆಂದು ಘೋಷಿಸಬೇಕು. ಇದಕ್ಕೆ ಸಂಬಂಧಿಸಿದ ಸಚಿವರು ನೌಕರರ ಮೇಲೆ ಯಾವುದೇ ಕಾನೂನು ಕ್ರಮಗಳನ್ನು ಕೈಗೊಳ್ಳದೆ ಸಮಸ್ಯೆ ಬಗೆಹರಿಸಿ, ನೌಕರರ ಸಂವಿಧಾನ ಬದ್ಧ ಹಕ್ಕುಗಳನ್ನು ಎತ್ತಿ ಹಿಡಿಯಬೇಕು ಎಂದು ಆಗ್ರಹಿಸಿದರು.
ರೈತ ಸಂಘದ ಜಿಲ್ಲಾ ಮುಖಂಡ ಸೈಯದ್ ಶಫಿವುಲ್ಲಾ, ಮಂಜುನಾಥ ಆರೆಕೊಪ್ಪ, ಪಕ್ಕೀರಸ್ವಾಮಿ, ತಾಲೂಕು ಮಹಿಳಾ ಸಂಚಾಲಕಿ ಸುನಿತಾ, ಬಾಷಾ ಸಾಬ್, ಮೇಘರಾಜ ಗೌಡ, ಬಸವರಾಜಪ್ಪ, ಚಂದ್ರಪ್ಪ ಇತರರಿದ್ದರು.