Malenadu Mitra
ರಾಜ್ಯ ಶಿವಮೊಗ್ಗ

ಡಾ.ಬಿ.ಆರ್. ಅಂಬೇಡ್ಕರ್ ದೇಶ ಕಂಡ ಮಹಾನ್ ಚೇತನ:ಎಂ.ಕೆ.ಪ್ರಾಣೇಶ್

ಸಂವಿಧಾನ ಶಿಲ್ಪಿ, ಸಮಾನತೆಯ ಹರಿಕಾರ, ದೇಶ ಕಂಡ ಮಹಾನ್ ಚೇತನ ಅವರ ಕಲ್ಪನೆ ಆಲೋಚನೆಗಳು ದೇಶದ ಭವಿಷ್ಯದ ಭದ್ರ ಬುನಾದಿಯಾಗಿದೆ ಎಂದು ವಿಧಾನ ಪರಿಷತ್ತಿನ ಉಪ ಸಭಾಪತಿ ಎಂ.ಕೆ.ಪ್ರಾಣೇಶ್ ಅವರು ಹೇಳಿದರು.
ಅವರು ಚಿಕ್ಕಮಗಳೂರು ನಗರದ ಕುವೆಂಪು ಕಲಾ ಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ, ನಗರಸಭೆ ಹಾಗೂ ಡಾ.ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ ಇವರ ಸಂಯುಕ್ತಾಶ್ರಯದಲ್ಲಿ ನಡೆದ ಸಂವಿಧಾನ ಶಿಲ್ಪಿ, ಭಾರತ ರತ್ನ, ಡಾ.ಬಿ.ಆರ್.ಅಂಬೇಡ್ಕರ್ ಅವರ ೧೩೦ನೇ ಜನ್ಮ ದಿನಾಚರಣೆ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.
ಮಹಾನ್ ಚೇತನರ ಜಯಂತಿಗಳು ಕೇವಲ ಆಚರಣೆಗೆ ಮಾತ್ರ ಸೀಮಿತವಾಗದೆ ಅವರ ವಿಚಾರಧಾರೆಗಳು ಹಾಗೂ ಆದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಸಮಾಜಕ್ಕೆ ಉತ್ತಮವಾದ ಕೊಡುಗೆಗಳನ್ನು ನೀಡಬೇಕು ಎಂದ ಅವರು ಅಂಬೇಡ್ಕರ್ ಅವರು  ದೇಶದ ಭವಿಷ್ಯದ ದೃಷ್ಠಿಯಿಂದ ಬರೆದಂತಹ ಸಂವಿಧಾನದ ಕಾರಣದಿಂದಾಗಿ ನಾವುಗಳು ಇಂದು ವಿವಿಧ ಜವಾಬ್ದಾರಿಗಳನ್ನು ಹೊತ್ತು ಕಾರ್ಯನಿರ್ವಹಿಸುತ್ತಿದ್ದೇವೆ ಎಂದು ಹೇಳಿದರು.


ವ್ಯಕ್ತಿತ್ವಕ್ಕೆ ಬಗೆಯುವ ಅಪಚಾರ


ಶಾಸಕರಾದ  ಸಿ.ಟಿ.ರವಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಸ್ವಾತಂತ್ರ್ಯ ನಂತರದಲ್ಲಿ   ದೇಶದ ವಿಭಜನೆಯನ್ನು ವಿರೋಧಿಸಿದವರಲ್ಲಿ ಅಂಬೇಡ್ಕರ್ ಅವರು ಪ್ರಮುಖರಾಗಿದ್ದಾರೆ.  ಸ್ವಾತಂತ್ರ್ಯ ಬಂದು ೭೪ ವರ್ಷ ಕಳೆದರು ಇಂದಿಗೂ ಕೂಡ ಪ್ರಬಲ ಪ್ರಜಾಸತಾತ್ಮಕ ರಾಷ್ಟ್ರವಾಗಿ, ವಿವಿಧತೆಯಲ್ಲಿ ವೈವಿಧ್ಯತೆಯನ್ನು ಒಳಗೊಂಡು ಏಕತೆಯನ್ನು ಮೈಗೂಡಿಸಿಕೊಂಡು ದೇಶ ಮುಂದೆ ಸಾಗಲು ಡಾ.ಬಿ.ಆರ್.ಅಂಬೇಡ್ಕರ್ ಅವರು ನೀಡಿರುವಂತಹ ಸಂವಿಧಾನವು ಭದ್ರ ಬುನಾದಿಯಾಗಿದೆ ಎಂದು ಹೇಳಿದರು.
ಡಾ.ಬಿ.ಆರ್.ಅಂಬೇಡ್ಕರ್ ಅವರನ್ನು ಕೇವಲ ದಲಿತ ನಾಯಕ, ಮೂಕನಾಯಕ ಎಂದು ಬಿಂಬಿಸಿದರೆ ಅವರ ವ್ಯಕ್ತಿತ್ವಕ್ಕೆ ಬಗೆಯುವ ಅಪಚಾರವಾಗುತ್ತದೆ ಬದಲಾಗಿ ಇಡಿ ಜನಾಂಗಕ್ಕೆ  ಮಹನಾಯಕರಾಗಿದ್ದಾರೆ, ಅಂಬೇಡ್ಕರ್ ಅವರು  ಕತ್ತಲೆಯಿಂದ ಬೆಳಕಿನಡೆಗೆ ತೆಗೆದುಕೊಂಡು ಹೋಗುವ ದೀಪವಾಗಿದ್ದಾರೆ ಎಂದು ತಿಳಿಸಿದರು.
 
ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಸುಜಾತ ಕೃಷ್ಣಪ್ಪ ಮಾತನಾಡಿ, ಶೋಷಿತರ, ದಲಿತರ ಪರವಾಗಿ ದ್ವನಿ ಎತ್ತಿ ಅವರ ಏಳಿಗೆಗಾಗಿ ಕಾರ್ಯ ನಿರ್ವಹಿಸಿದ ಅವರ ತತ್ವ ಆದರ್ಶಗಳು ಎಲ್ಲರಿಗೂ ಮಾದರಿಯಾಗಿದ್ದು ಅವುಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು.

ಡಾ.ಬಿ.ಆರ್.ಅಂಬೇಡ್ಕರ್ ಅವರ ಜೀವನ ಮತ್ತು ಸಾಧನೆಯ ಬಗ್ಗೆ ಮೈಸೂರಿನ ವಿಶ್ರಾಂತ ಮಾಧ್ಯಮ ಉಪನ್ಯಾಸಕ ಹಾಗೂ ಅಂಬೇಡ್ಕರ್ ವಾದಿಗಳಾದ ಡಾ.ಬಿ.ಪಿ.ಮಹೇಶ್ ಚಂದ್ರ ಗುರು ಅವರು ಉಪನ್ಯಾಸ ನೀಡಿದರು.


ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷ ಬಿ.ಜೆ.ಸೋಮಶೇಖರಪ್ಪ, ಜಿಲ್ಲಾ ಪಂಚಾಯಿತಿ ಸದಸ್ಯರಾದ ಜಸಂತಾ ಅನಿಲ್ ಕುಮಾರ್, ರವೀಂದ್ರ ಬೆಳವಾಡಿ. ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ದ್ರಾಕ್ಷಾಯಿಣಿ ಪೂರ್ಣೇಶ್, ತಾಲ್ಲೂಕು ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷೆ ಸಾವಿತ್ರಿ ರಾಜ್ ಕುಮಾರ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಎಸ್.ಪೂವಿತ, ಉಪ ವಿಭಾಗಾಧಿಕಾರಿ ಡಾ.ಹೆಚ್.ಎಲ್.ನಾಗರಾಜ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್.ಎಂ.ಹೆಚ್, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕಿ ಬಿ.ವಿ.ಚೈತ್ರ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಆನಂದ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Ad Widget

Related posts

ಸಾಗರಕ್ಕೆ ಕೊರೊನ ಟೆಸ್ಟ್ ಲ್ಯಾಬ್ ಮಂಜೂರು

Malenadu Mirror Desk

ಚಿತ್ರಸಿರಿಗೆ ಬಹುಭಾಷಾ ನಟ ಪ್ರಕಾಶ್ ರಾಜ್ ಭೇಟಿ,ಕೋಳಿ ಕಜ್ಜಾಯ ಸವಿದು, ಚಿತ್ತಾರ,ತೋರಣ ಬುಟ್ಟಿ ಖರೀದಿ

Malenadu Mirror Desk

ಪ್ರಮುಖ ಕಾಮಗಾರಿಗಳನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಿ: ಜಿಲ್ಲಾಧಿಕಾರಿ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.