ಮುಖ್ಯಮಂತ್ರಿ ಯಡಿಯೂರಪ್ಪ ಅವರು ಕೊರೊನ ಸೋಂಕಿನ ಹಿನ್ನೆಲೆಯಲ್ಲಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದು, ಶೀಘ್ರ ಗುಣಮುಖರಾಗಿ ಹೊರಬರಲಿದ್ದಾರೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದ್ದಾರೆ.
ಉಪಚುನಾವಣೆ ಪ್ರಚಾರದಲ್ಲಿ ಬಿಡುವಿಲ್ಲದ ಪ್ರವಾಸದ ಕಾರಣದಿಂದ ಜ್ವರ ಮತ್ತು ಸುಸ್ತು ಕಾಣಿಸಿಕೊಂಡಿತ್ತು. ಎಂ.ಎಸ್.ರಾಮಯ್ಯ ಮೆಡಿಕಲ್ ಕಾಲೇಜಿನಲ್ಲಿ ಪರೀಕ್ಷೆ ಮಾಡಿಸಿದಾಗ ಕೊರೊನ ಇರುವುದು ದೃಢವಾಗಿದೆ. ತಕ್ಷಣ ಅವರನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಲ್ಲಿನ ವೈದ್ಯರೊಂದಿಗೆ ಮಾತನಾಡಿದ್ದು, ಬೇರೆ ಯಾವುದೇ ತೊಂದರೆ ಇಲ್ಲ. ಮೊದಲ ಹಂತದ ಲಸಿಕೆ ಹಾಕಿಸಿಕೊಂಡಿರುವುದರಿAದ ಆತಂಕಪಡುವ ಅಗತ್ಯವಿಲ್ಲ ಮೂರು ದಿನದಲ್ಲಿ ಅವರು ಗುಣಮುಖಹೊಂದಲಿದ್ದಾರೆ ಎಂದು ಯಡಿಯೂರಪ್ಪ ಪುತ್ರರೂ ಆದ ಸಂಸದ ರಾಘವೇಂದ್ರ ಮಾಧ್ಯಮಗಳಿಗೆ ತಿಳಿಸಿದ್ದಾರೆ.