ಯುವತಿಯ ಹೆಸರಲ್ಲಿ ನಕಲಿ ಇನ್ಸ್ಟ್ರಾಗ್ರಾಂ ಖಾತೆ ತೆರೆದು ಅಶ್ಲೀಲ ಚಿತ್ರಗಳನ್ನು ಅಪಲೋಡ್ ಮಾಡಿ ಯುವತಿಗೆ ಮಾನಸಿಕ ಹಾಗೂ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪಿಯನ್ನು ಶಿವಮೊಗ್ಗ ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ.
ಆಂಧ್ರಪ್ರದೇಶದ ರೇಣುಗುಂಟದ ಬಷೀರ್ (೨೬)ಬಂಧಿತ ವ್ಯಕ್ತಿಯಾಗಿದ್ದು, ಸಾಫ್ಟ್‌ವೇರ್ ಎಂಜನಿಯರ್ ಆಗಿದ್ದ ಆರೋಪಿಯ ಯುವತಿ ಹೆಸರಲ್ಲಿ ನಕಲಿ ಖಾತೆ ತೆರೆದು ಕಿರುಕುಳ ನೀಡುತ್ತಿದ್ದ ಯುವತಿ ನೀಡಿದ್ದ ದೂರಿನ ಮೇಲೆ ತನಿಖೆ ಕೈಗೊಂಡ ಸೈಬರ್ ಠಾಣೆ ಸಿಪಿಐ ಕೆ.ಟಿ.ಗುರುರಾಜ್ ನೇತೃತ್ವದ ತಂಡ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ. ಆರೋಪಿಯಿಂದ ಕೃತ್ಯಕ್ಕೆ ಬಳಸಿದ ೨ ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.