ಶಿವಮೊಗ್ಗ ಜಿಲ್ಲೆಯಲ್ಲಿ ಘೋಷಿಸಲಾಗಿರುವ ಕೋವಿಡ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಿನಿಂದ ಜಾರಿಗೊಳಿಸುವಂತೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಆದೇಶ ಹೊರಡಿಸಿದ್ದಾರೆ.
ಮೇ 12ರವರೆಗೆ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಿನಿಂದ ಜಾರಿಗೊಳಿಸುವುದನ್ನು ಖಚಿತಪಡಿಸಿಕೊಳ್ಳುವುದು ಸಂಬಂಧಿಸಿದ ಜಿಲ್ಲಾಮಟ್ಟದ, ತಾಲೂಕು ಮಟ್ಟದ ಪ್ರಾಧಿಕಾರಗಳ ಮತ್ತು ಮುಖ್ಯಸ್ಥರ ಜವಾಬ್ದಾರಿಯಾಗಿದೆ. ಮಾರ್ಗಸೂಚಿಗಳನ್ನು ಮಹಾನಗರ ಪಾಲಿಕೆ ಸೇರಿದಂತೆ ಸ್ಥಳೀಯ ಸಂಸ್ಥೆಗಳು ಮತ್ತು ಎಲ್ಲಾ ಇಲಾಖಾ ಮುಖ್ಯಸ್ಥರು ಕಟ್ಟುನಿಟ್ಟಾಗಿ ಅನುಷ್ಟಾನಗೊಳಿಸಬೇಕು. ಈ ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ 2005 ಹಾಗೂ ಐಪಿಸಿ ಕಲಂ ಅಡಿಯಲ್ಲಿ ಕ್ರಮ ಜರುಗಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.