Malenadu Mitra
ರಾಜ್ಯಶಿವಮೊಗ್ಗ

34 ಕೊಳಚೆ ಪ್ರದೇಶಗಳ 5531 ಕುಟುಂಬಗಳಿಗೆ ಹಕ್ಕುಪತ್ರ

ಶಿವಮೊಗ್ಗ ನಗರ ವಿಧಾನಸಭಾ ವ್ಯಾಪ್ತಿಯಲ್ಲಿ ಈಗಾಗಲೇ ಗುರುತಿಸಲಾಗಿರುವ 34 ಕೊಳಚೆ ಪ್ರದೇಶಗಳ 5531 ಕುಟುಂಬಗಳಿಗೆ ಹಕ್ಕುಪತ್ರಗಳನ್ನು ವಿತರಿಸಲು ಸಿದ್ಧತೆ ನಡೆಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು.

ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಬರುವ ಸರ್ಕಾರಿ ಮಾಲಿಕತ್ವದ ಜಮೀನಿನಲ್ಲಿರುವ ಘೋಷಿತ ಕೊಳಚೆ ಪ್ರದೇಶಗಳ ಕುಟುಂಬಗಳಿಗೆ ಸ್ವಂತ ಸೂರಿನ ಮಾಲಿಕತ್ವ ಹೊಂದಲು ಅನುಕೂಲವಾಗುವಂತೆ ರಾಜ್ಯ ಸರ್ಕಾರ ಈಗಾಗಲೇ ಹಕ್ಕುಪತ್ರ ನೀಡಲು ಆದೇಶ ಹೊರಡಿಸಿದೆ.

ಈ ಹಕ್ಕುಪತ್ರಗಳನ್ನು ವಿತರಿಸಲು ಈ ಹಿಂದೆ ನಿಗದಿಪಡಿಸಿದ್ದ ದರವನ್ನು ಸಹ ಸರ್ಕಾರ ಕಡಿಮೆ ಮಾಡಿದೆ. ಅದರಂತೆ ಪುರುಸಭೆ ಮತ್ತು ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿ 1200 ಚದರ ಅಡಿಗಳಿಗೆ ಮೀರದಂತೆ ರೂ. 2ಸಾವಿರ ಹಾಗೂ ಪ.ಜಾತಿ, ಪಂಗಡ ಮತ್ತು ಅಂಗವಿಕಲರಿಗೆ 1ಸಾವಿರ ರೂ. ನಿಗದಿಪಡಿಸಲಾಗಿದೆ. ನಗರ ಸಭೆ ವ್ಯಾಪ್ತಿಯಲ್ಲಿ 600 ಚದರ ಅಡಿಗಳಿಗೆ ಮೀರದಂತೆ ರೂ. 2 ಸಾವಿರ ಹಾಗೂ 1ಸಾವಿರ ನಿಗದಿಪಡಿಸಲಾಗಿದೆ. ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ 600 ಚದಡ ಅಡಿಗಳಿಗೆ ಮೀರದಂತೆ 4ಸಾವಿರ ರೂ. ಹಾಗೂ ಪ.ಜಾತಿ, ಪಂಗಡ, ಅಂಗವಿಕಲರಿಗೆ 2ಸಾವಿರ ದರ ನಿಗದಿಪಡಿಸಲಾಗಿದೆ ಎಂದು ಹೇಳಿದರು.

ಶಿವಮೊಗ್ಗ ನಗರದಲ್ಲಿ ಘೋಷಿತ ಕೊಳಚೆ ಪ್ರದೇಶಗಳಲ್ಲಿರುವ 5531 ಕುಟುಂಬಗಳ 26732 ನಿವಾಸಿಗಳು ಇದರ ಪ್ರಯೋಜನ ಪಡೆಯಲಿದ್ದಾರೆ. ಮಹಾನಗರ ಪಾಲಿಕೆ ಮತ್ತು ಇತರ ಸರ್ಕಾರಿ ಇಲಾಖೆಗಳ ಜಮೀನುಗಳಲ್ಲಿರುವ ಈ ಕೊಳಚೆ ಪ್ರದೇಶಗಳ ಜಮೀನನ್ನು ಕೊಳಗೇರಿ ಅಭಿವೃದ್ಧಿ ಮಂಡಳಿಗೆ ಒಂದು ತಿಂಗಳ ಒಳಗಾಗಿ ಹಸ್ತಾಂತರಿಸಿ ಶೀಘ್ರ ಹಕ್ಕುಪತ್ರ ನೀಡಲು ಸೂಚನೆ ನೀಡಲಾಗಿದೆ ಎಂದು ಹೇಳಿದರು.

ಇದರಿಂದ ಕೊಳಗೇರಿ ನಿವಾಸಿಗಳ ದಶಕಗಳ ಕನಸು ನನಸಾಗಲಿದ್ದು, ಇದೇ ರೀತಿ ಜಿಲ್ಲೆಯ ಇತರ ತಾಲೂಕುಗಳಲ್ಲಿರುವ ಘೋಷಿತ ಕೊಳಚೆ ಪ್ರದೇಶಗಳ 13,943 ಕುಟುಂಬಗಳಿಗೆ ಸಹ ಹಕ್ಕುಪತ್ರ ನೀಡಲು ಸಿದ್ಧತೆ ಕೈಗೊಳ್ಳಲು ಸೂಚಿಸಲಾಗಿದೆ ಎಂದು ಹೇಳಿದರು.

ಮುಂದಿನ ಹಂತದಲ್ಲಿ ಖಾಸಗಿ ಜಮೀನುಗಳಲ್ಲಿರುವ ಘೋಷಿತ ಕೊಳಚೆ ಪ್ರದೇಶಗಳಲ್ಲಿ ವಾಸವಾಗಿರುವವರಿಗೆ ಹಕ್ಕುಪತ್ರ ವಿತರಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು. ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.


Ad Widget

Related posts

ಮೆಗ್ಗಾನ್‍ನಲ್ಲಿ ಸತ್ತವರ ಸಂಖ್ಯೆ ಮುಚ್ಚಿಡಲಾಗುತ್ತಿದೆಯೇ ? ಎರಡು ದಿನಗಳಲ್ಲಿ 41 ಸಾವು ?

Malenadu Mirror Desk

ಪುರದಾಳು ಗ್ರಾಮ ಪಂಚಾಯಿತಿಯಲ್ಲಿ ಮಹಿಳೆಯರ ಮೇಲುಗೈ 9 ಸ್ಥಾನಗಳಲ್ಲಿ ಆರು ಸ್ಥಾನ ಗೆದ್ದು ಬೀಗಿದ ವನಿತೆಯರು

Malenadu Mirror Desk

ಬೂತ್ ಮಟ್ಟದಲ್ಲಿ ಗರಿಷ್ಟ ಲಸಿಕೆ ನೀಡಲು ಕ್ರಮ: ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.