ಶಿವಮೊಗ್ಗ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟಿರ್ ಅವರು ಗುರುವಾರ ಭದ್ರಾವತಿಯ ವಿಐಎಸ್‍ಎಲ್ ಆವರಣದಲ್ಲಿರುವ ಮೆಡಿಕಲ್ ಆಕ್ಸಿಜನ್ ಉತ್ಪಾದನಾ ಘಟಕದ ನವೀಕರಣ ವ್ಯವಸ್ಥೆಯನ್ನು ವೀಕ್ಷಿಸಿದರು.
ಕೊರೊನ ಸಂದರ್ಭದಲ್ಲಿ ವಿಐಎಸ್‍ಎಲ್ ಘಟಕದಿಂದ ಉತ್ಪಾದನೆಯಾಗುವ ಆಮ್ಲಜನಕವು ಜಿಲ್ಲೆಯ ಅಗತ್ಯ ಪೂರೈಸುವುದರ ಜತೆಗೆ ನೆರೆಯ ಜಿಲ್ಲೆಗಳಿಗೂ ಅನುಕೂಲವಾಗಲಿದೆ. ರಾಜ್ಯದಲ್ಲಿ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಆಮ್ಲಜನಕ ಅತ್ಯಗತ್ಯವಾಗಿದ್ದು, ರಾಜ್ಯ ಸರಕಾರ ಸೋಂಕು ನಿಯಂತ್ರಣಕ್ಕೆ ಶ್ರಮಿಸುತ್ತಿದೆ. ಇದಕ್ಕೆ ಜನರ ಸಹಕಾರ ಅತ್ಯಗತ್ಯ ಎಂದು ಹೇಳಿದರು.
ಜಿಲ್ಲಾ ಉಸ್ತವಾರಿ ಸಚಿವ ಕೆ.ಎಸ್.ಈಶ್ವರಪ್ಪ, ಶಾಸಕ ಬಿ.ಕೆ.ಸಂಗಮೇಶ್ವರ್, ರುದ್ರೇಗೌಡ, ಕಾಡಾ ಅಧ್ಯಕ್ಷೆ ಪವಿತ್ರ ರಾಮಯ್ಯ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಲ್.ವೈಶಾಲಿ, ಎಸ್.ದತ್ತಾತ್ರಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
previous post