ಶಿವಮೊಗ್ಗ ನಗರದ ಎಪಿಎಂಸಿ ತರಕಾರಿ ಮಾರುಕಟ್ಟೆಯಲ್ಲಿ ಕೇವಲ ಸಗಟು ವ್ಯಾಪಾರಕ್ಕೆ ಮಾತ್ರ ಅವಕಾಶ ಕಲ್ಪಿಸಲಾಗಿರುವ ಹಿನ್ನೆಲೆಯಲ್ಲಿ, ಎಪಿಎಂಸಿ ಒಳಗೆ ಮತ್ತು ಮುಂಭಾಗದಲ್ಲಿ ತರಕಾರಿ ಚಿಲ್ಲರೆ ಮಾರಾಟ ಮಾಡುತ್ತಿದ್ದವರ ಅನುಕೂಲಕ್ಕಾಗಿ ನಗರದ ಈ ಕೆಳಕಂಡ ಆರು ಕಡೆಗಳಲ್ಲಿ ತಾತ್ಕಾಲಿಕ ಮಾರುಕಟ್ಟೆ ವ್ಯವಸ್ಥೆ ಮಾಡಲಾಗಿದೆ ಎಂದು ಮಹಾನಗರ ಪಾಲಿಕೆ ಆಯುಕ್ತ ಚಿದಾನಂದ ವಟಾರೆ ತಿಳಿಸಿದ್ದಾರೆ.
ವಿನೋಬನಗರ ಶಿವಾಲಯ ದೇವಸ್ಥಾನ ಹತ್ತಿರ, ಕಾಶೀಪುರ ಕೇಂಬ್ರಿಡ್ಜ್ ಶಾಲೆಯ ಹತ್ತಿರ, ನವುಲೆ ಕ್ರೀಡಾಂಗಣದ ಎದುರಿನ ಪ್ರದೇಶ, ಖಾಸಗಿ ಬಸ್ ನಿಲ್ದಾಣದ ಒಳಗೆ, ತುಂಗಾ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಎದುರಿನ ಪ್ರದೇಶ ಮತ್ತು ಸೈನ್ಸ್ ಮೈದಾನ ಬಿಎಚ್ ರಸ್ತೆಯಲ್ಲಿ ಅವಕಾಶ ಕಲ್ಪಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ಈ ನಿಗದಿತ ಸ್ಥಳಗಳಲ್ಲಿ ಬೆಳಿಗ್ಗೆ 6ರಿಂದ 10ರವರೆಗೆ ವ್ಯಾಪಾರ ಮಾಡಲು ಅವಕಾಶ ಕಲ್ಪಿಸಲಾಗಿದ್ದು, ಸಾರ್ವಜನಿಕರು ಇದರ ಉಪಯೋಗ ಪಡೆದುಕೊಳ್ಳುವಂತೆ ಅವರು ಮನವಿ ಮಾಡಿದ್ದಾರೆ.