ಶಿವಮೊಗ್ಗ ಜಿಲ್ಲೆಯಲ್ಲಿ ಕೊರೊನ ಮತ್ತಷ್ಟು ಗಂಭೀರವಾಗಿದ್ದು, ಸೋಮವಾರ ಸೋಂಕಿತರ ಸಂಖ್ಯೆ ಸಾವಿರ ದಾಟಿದೆ. ಒಟ್ಟು 1049 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, 11 ಮಂದಿ ಸೋಂಕಿತರು ಸಾವಿಗೀಡಾಗಿದ್ದಾರೆ. 283 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಕೊರೊನದಿಂದ ಸತ್ತವರ ಸಂಖ್ಯೆ 506ಕ್ಕೆ ಏರಿದೆ. ಶಿವಮೊಗ್ಗ ತಾಲೂಕಿನಲ್ಲಿ 329 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಭದ್ರಾವತಿಯಲ್ಲಿ 246,ಶಿಕಾರಿಪುರ 75,ತೀರ್ಥಹಳ್ಳಿಯಲ್ಲಿ 49 ,ಸೊರಬ 114,ಸಾಗರ 167,ಹೊಸನಗರ 54 ಹಾಗೂ ಇತರೆ ಜಿಲ್ಲೆಗಳ 15 ರೋಗಿಗಳಲ್ಲಿ ಸೋಂಕು ಪತ್ತೆಯಾಗಿದೆ. 62 ಮಂದಿ ವಿದ್ಯಾರ್ಥಿಗಳಲ್ಲಿ ಸೋಂಕು ಪತ್ತೆಯಾಗಿದೆ. ಜಿಲ್ಲೆಯಲ್ಲಿ ಪ್ರಸ್ತುತ 5363 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಆಸ್ಪತ್ರೆಗಳಲ್ಲಿ ಒತ್ತಡ
ಜಿಲ್ಲೆಯಲ್ಲಿ ಕೊರೊನ ಪ್ರಕರಣಗಳು ಹೆಚ್ಚುತ್ತಿದ್ದಂತೆ ಆಸ್ಪತ್ರೆಗಳ ಮೇಲೆ ಒತ್ತಡ ಹೆಚ್ಚಾಗುತ್ತಿದೆ. ಮೆಗ್ಗಾನ್ ಆಸ್ಪತ್ರೆಯಲ್ಲಿ ಈಗಾಗಲೇ ಬೆಡ್‍ಗಳು ಭರ್ತಿಯಾಗಿವೆ. ಆಸ್ಪತ್ರೆಯಿಂದ ಬಿಡುಗಡೆಯಾಗುವವರ ಸಂಖ್ಯೆ ಕಡಿಮೆಯಾಗಿದ್ದು, ಸೇರುವವ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿದೆ. ಮೆಗ್ಗಾನ್ ಬೋಧನಾ ಆಸ್ಪತ್ರೆಯಲ್ಲಿ ಸಿಬ್ಬಂದಿಗಳ ಕೊರತೆಯಿದ್ದು, ಇರುವ ಸಿಬ್ಬಂದಿಗಳಿಗೂ ಕೆಲಸದ ಒತ್ತಡ ಹೆಚ್ಚಾಗಿದೆ ಎನ್ನಲಾಗಿದೆ.
previous post
next post