ಕೋವಿಡ್ ಲಾಕ್‍ಡೌನ್ ಹಿನ್ನೆಲೆಯಲ್ಲಿ ಜಿಲ್ಲೆಯ ಹೋಬಳಿ ಮಟ್ಟದಲ್ಲಿರುವ ರೈತ ಸಂಪರ್ಕ ಕೇಂದ್ರಗಳು ಬೆಳಿಗ್ಗೆ 6ರಿಂದ 10ರವರೆಗೆ ಮಾತ್ರ ಕಾರ್ಯಾಚರಿಸಲಿವೆ ಎಂದು ಶಿವಮೊಗ್ಗ ಕೃಷಿ ಇಲಾಖೆ ಜಂಟಿ ನಿರ್ದೇಶಕ ಕಿರಣ್ ಕುಮಾರ್ ತಿಳಿಸಿದ್ದಾರೆ.
ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡುವ, ಕೃಷಿ ಪರಿಕರಗಳನ್ನು ಖರೀದಿಸುವ ಮತ್ತು ಇಲಾಖೆಯ ಇತರ ಸವಲತ್ತುಗಳನ್ನು ಪಡೆಯುವ ರೈತರು ಈ ಸಮಯದಲ್ಲಿ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಬಹುದು ಎಂದು ಅವರು ಹೇಳಿದ್ದಾರೆ.
ಇಲಾಖೆಯಿಂದ ಅಧಿಕೃತ ಪರವಾನಿಗೆ ಪಡೆದು ರಸಗೊಬ್ಬರ, ಬೀಜ ಮತ್ತು ಕೀಟನಾಶಕ ಮಾರಾಟ ಮಳಿಗೆಗಳು ಸದರಿ ಸದರಿ ಅವಧಿಯಲ್ಲಿ ಕಾರ್ಯಾಚರಿಸಲು ಅವಕಾಶ ಕಲ್ಪಿಸಲಾಗಿದೆ. ಆದರೆ ಕೋವಿಡ್ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಅವರು ಹೇಳಿದ್ದಾರೆ.