ಪತ್ರಕರ್ತರನ್ನು ಫ್ರಂಟ್ ಲೈನ್ ಕೊರೊನ ವಾರಿಯರ್ಸ್ ಎಂದು ಈಗಾಗಲೇ ಪರಿಗಣಿಸಿರುವ ಸರಕಾರ 18 ವರ್ಷ ಮೇಲ್ಪಟ್ಟ ಎಲ್ಲಾ ಪತ್ರಕರ್ತರು ಮತ್ತು ಪತ್ರಿಕಾಲಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗೆ ತಕ್ಷಣದಿಂದಲೇ ಕೋವಿಡ್ ಲಸಿಕೆ ನೀಡುವಂತೆ ಸರಕಾರ ಆದೇಶ ಹೊರಡಿಸಿದೆ.
ಸೋಮವಾರ ಈ ಸಂಬಂಧ ಸುತ್ತೋಲೆ ಹೊರಡಿಸಿರುವ ರಾಷ್ಟ್ರೀಯ ಆರೋಗ್ಯ ಅಭಿಯಾನದ ನಿರ್ದೇಶಕಿ ಅರುಂಧತಿ ಅವರು, ಮುಖ್ಯಮಂತ್ರಿಗಳ ಆದೇಶದಂತೆ ಪತ್ರಕರ್ತರಿಗೆ ಲಸಿಕೆ ಹಾಕಬೇಕೆಂದು ಆರೋಗ್ಯ ಇಲಾಖೆಗೆ ಸೂಚನೆ ನೀಡಿದ್ದಾರೆ. 45 ವರ್ಷ ಮೇಲ್ಪಟ್ಟ ಪತ್ರಕರ್ತರಿಗೆ ಲಸಿಕೆ ಆಗಿದೆ ಎಂಬುದನ್ನು ಪರಿಶೀಲಿಸಿ, ಆಗದಿದ್ದಲ್ಲಿ ಅವರನ್ನೂ ಪರಿಗಣಿಸಿ ತಕ್ಷಣ ಕಾರ್ಯೋನ್ಮುಖರಾಗಬೇಕೆಂದು ಸುತ್ತೋಲೆಯಲ್ಲಿ ಸೂಚಿಸಿದ್ದಾರೆ