ಹಿರಿಯ ಪತ್ರಕರ್ತ ಮಹದೇವ್ ಪ್ರಕಾಶ್ ಅವರು ಕೊರೋನಾ ಸೋಂಕು ತಗುಲಿ ಕಳೆದ 10 ದಿನಗಳಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.ಆದರೆ ಚಿಕಿತ್ಸೆ ಫಲಿಸದೆ ಇಂದು ಮಹದೇವ್ ಪ್ರಕಾಶ್ ಕೊನೆಯುಸಿರೆಳೆದಿದ್ದಾರೆ.
ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾಗಿ ಕೆಲಸ ಮಾಡಿದ್ದ ಮಹದೇವ್ ಪ್ರಕಾಶ್ ಅವರು
ಈ ಭಾನುವಾರ ಪತ್ರಿಕಾ ಸಂಪಾದಕರಾಗಿದ್ದರು. ಜತೆಗೆ ರಾಜಕೀಯ ವಿಶ್ಲೇಷಕರಾಗಿಯೂ ಹೆಸರು ಮಾಡಿದ್ದರು. ಅವರ ಅಗಲಿಕೆಯಿಂದ ಮಾಧ್ಯಮ ಕ್ಷೇತ್ರಕ್ಕೆ ತುಂಬಲಾರದ ನಷ್ಟವಾಗಿದೆ.
ಮಹದೇವ್ ಪ್ರಕಾಶ್ ಆತ್ಮಕ್ಕೆ ಚಿರಶಾಂತಿಯನ್ನು ಹಾಗೂ ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿ ಅವರ ಕುಟುಂಬಕ್ಕೆ ಭಗವಂತ ಕರುಣಿಸಲೆಂದು ಪ್ರಾರ್ಥಿಸುತ್ತೇನೆ.-ಕೆ ಎಸ್ ಈಶ್ವರಪ್ಪ
ಗ್ರಾಮೀಣಾಭಿವೃದ್ಧಿ ಮತ್ತು
ಪಂಚಾಯತ್ ರಾಜ್ ಸಚಿವರು.