ಶಿವಮೊಗ್ಗ ಜಿಲ್ಲೆಯಲ್ಲಿ ಕೊರೊನ ಆತಂಕ ಮುಂದುವರಿದಿದ್ದು, ಶನಿವಾರ 15 ಸೋಂಕಿತರು ಸಾವಿಗೀಡಾಗಿದ್ದು, 803 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ
ಇದೇ ವೇಳೆ 762 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಕೊರೊನದಿಂದ ಸತ್ತವರ ಸಂಖ್ಯೆ 572 ಕ್ಕೇರಿದೆ. ಶಿವಮೊಗ್ಗ ತಾಲೂಕಿನಲ್ಲಿ 178 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಭದ್ರಾವತಿಯಲ್ಲಿ 68, ಶಿಕಾರಿಪುರ 155, ತೀರ್ಥಹಳ್ಳಿಯಲ್ಲಿ 113 ,ಸೊರಬ 74, ಸಾಗರ 152, ಹೊಸನಗರ 52 ಹಾಗೂ ಇತರೆ ಜಿಲ್ಲೆಗಳ 11 ರೋಗಿಗಳಲ್ಲಿ ಸೋಂಕು ಪತ್ತೆಯಾಗಿದೆ. 30 ಮಂದಿ ವಿದ್ಯಾರ್ಥಿಗಳಲ್ಲಿ ಸೋಂಕು ಪತ್ತೆಯಾಗಿದೆ. ಜಿಲ್ಲೆಯಲ್ಲಿ ಪ್ರಸ್ತುತ 7318 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.