ಶಿವಮೊಗ್ಗ ಜಿಲ್ಲೆಯಲ್ಲಿ ಕೊರೊನ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ ಸಾವಿರ ಗಡಿ ದಾಟಿದ್ದು, ಸೋಮವಾರ ಒಂದೇ ದಿನ 1028 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರೆ, 15 ಸೋಂಕಿತರು ನಿಧನರಾಗಿದ್ದಾರೆ. 676 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಜಿಲ್ಲೆಯಲ್ಲಿ ಈವರೆಗೆ ಕೊರೊನದಿಂದ ಸತ್ತವರ ಸಂಖ್ಯೆ 601 ಕ್ಕೇರಿದೆ. ಶಿವಮೊಗ್ಗ ತಾಲೂಕಿನಲ್ಲಿ 162 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಭದ್ರಾವತಿಯಲ್ಲಿ58, ಶಿಕಾರಿಪುರ 103, ತೀರ್ಥಹಳ್ಳಿಯಲ್ಲಿ101 ,ಸೊರಬ 88, ಸಾಗರ 141, ಹೊಸನಗರ 9 ಹಾಗೂ ಇತರೆ ಜಿಲ್ಲೆಗಳ 14 ರೋಗಿಗಳಲ್ಲಿ ಸೋಂಕು ಪತ್ತೆಯಾಗಿದೆ. 35 ಮಂದಿ ವಿದ್ಯಾರ್ಥಿಗಳಲ್ಲಿ ಸೋಂಕು ಪತ್ತೆಯಾಗಿದೆ. ಜಿಲ್ಲೆಯಲ್ಲಿ ಪ್ರಸ್ತುತ 6828ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
previous post